ಡಾ. ಆರ್. ಧನರಾಜ್ ಅವರಿಗೆ ಪ್ರತಿಷ್ಠಿತ “ಕರಾವಳಿ ರತ್ನ ಪ್ರಶಸ್ತಿ”ಗೆ ಆಯ್ಕೆ

ಕೇರಳ ರಾಜ್ಯ ಕನ್ನಡ ಭಾಷಾ ಅಲ್ಪಸಂಖ್ಯಾತರ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸಂಘಟನೆಯಾದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.), ಕಾಸರಗೋಡು ಇದರ ನೇತೃತ್ವದಲ್ಲಿ ಕಾಸರಗೋಡು ಕನ್ನಡ ಗ್ರಾಮದಲ್ಲಿ 2026 ನವಂಬರ್ 28 ಮತ್ತು 29ರಂದು ನಡೆಯುವ ಕೇರಳ ರಾಜ್ಯ 8 ನೇ ಕನ್ನಡ ಸಮ್ಮೇಳನ- 2026, ಕೇರಳ -ಕರ್ನಾಟಕ ಉತ್ಸವದಲ್ಲಿ 2026ನೇ ಸಾಲಿನ ಪ್ರತಿಷ್ಠಿತ ಕರಾವಳಿ ರತ್ನ ಪ್ರಶಸ್ತಿಗೆ ಡಾ.ಆರ್. ಧನರಾಜ್ ಆಯ್ಕೆಯಾಗಿದ್ದಾರೆ.

ಮಂಗಳೂರಿನ ಉದ್ಯಮಿ,ತುಳು ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ, ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷ ,ಬೆಂಗಳೂರು ಇದರ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ‘ಕೋಟಿ ಚೆನ್ನಯ’ ಚಲನಚಿತ್ರ ನಿರ್ಮಾಪಕರು ,ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಡಾ.ಆರ್.ಧನರಾಜ್ ಅವರು ರಾಜಕೀಯ ಕ್ಷೇತ್ರದಲ್ಲಿ ವಿವಿಧ ಜವಾಬ್ದಾರಿಯುತ ಹುದ್ದೆಗಳನ್ನು ಯಶಸ್ವಿಯಾಗಿ ನಿಭಾಯಿಸಿ ಜನ ಮನ್ನಣೆಗಳಿಸಿದ್ದಾರೆ.

ಮಂಗಳೂರಿನ ಯಶಸ್ವಿ ಉದ್ಯಮಿಯಾಗಿಯೂ ಗುರುತಿಸಿಕೊಂಡಿರುವ ಇವರು ಉದ್ಯಮ ಚಲನಚಿತ್ರ ,ಸಾಂಸ್ಕೃತಿಕ, ಕ್ರೀಡಾ, ಸಮಾಜ ಸೇವಾ ಕ್ಷೇತ್ರಗಳಲ್ಲೂ ತನ್ನ ಕಾರ್ಯಕ್ಷೇತ್ರವನ್ನು ವಿಸ್ತರಿಸಿಕೊಂಡಿದ್ದಾರೆ.
ಡಾ. ಆರ್. ಧನರಾಜ್ ಅವರಿಗೆ ಪ್ರತಿಷ್ಠಿತ ಕರಾವಳಿ ರತ್ನ ಪ್ರಶಸ್ತಿಯನ್ನು ಘೋಷಿಸಲಾಗಿದೆಯೆಂದು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ), ಕಾಸರಗೋಡು ಇದರ ಅಧ್ಯಕ್ಷ ಶಿವರಾಮ ಕಾಸರಗೋಡು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!