ಕಾಸರಗೋಡಿನಲ್ಲಿ ರೈಲು ಡಿಕ್ಕಿಯಾಗಿ ಜಿಲ್ಲಾ ಪಂಚಾಯತ್ ಉದ್ಯೋಗಿಯೊಬ್ಬರು ಮೃತಪಟ್ಟಿದ್ದಾರೆ.ಪಯ್ಯನ್ನೂರು ಕಂಡೋತ್ ನಿವಾಸಿ ಎಂ.ವಿ. ಅನೂಪ್ (41) ಮೃತ ವ್ಯಕ್ತಿ. ಕಾಸರಗೋಡು ಜಿಲ್ಲಾ ಪಂಚಾಯತ್‌ನ ಎಲ್‌ಎಸ್‌ಜಿಡಿ ವಿಭಾಗದ ಕಚೇರಿಯಲ್ಲಿ ಹಿರಿಯ ಕ್ಲರ್ಕ್ ಆಗಿ ಸೇವೆ ಸಲ್ಲಿಸುತ್ತಿದ್ದ ಅವರು, ಈ ಹಿಂದೆ ಬದಿಯಡ್ಕ ಗ್ರಾಮ ಪಂಚಾಯತ್‌ನಲ್ಲಿಯೂ ಕರ್ತವ್ಯ ನಿರ್ವಹಿಸಿದ್ದರು.

ಗುರುವಾರ ರಾತ್ರಿ ಕಾಞಂಗಾಡಿನ ಪಡನ್ನಕ್ಕಾಡ್ ಮುಳ್ಳಪಳ್ಳಿ ಪ್ರದೇಶದಲ್ಲಿ ರೈಲು ಡಿಕ್ಕಿಯಾಗಿ ಮೃತಪಟ್ಟ ಸ್ಥಿತಿಯಲ್ಲಿ ಅನೂಪ್ ಅವರ ಮೃತದೇಹ ಪತ್ತೆಯಾಗಿದೆ.
ಸ್ಥಳೀಯರಿಂದ ಮಾಹಿತಿ ಲಭಿಸಿದ ತಕ್ಷಣ ಹೊಸದುರ್ಗ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಬಳಿಕ ಮೃತದೇಹವನ್ನು ಕಾಞಂಗಾಡ್ ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಯಿತು.ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

