ಉಪ್ಪಳದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ ಭಾರೀ ಅಗ್ನಿ ಅವಘಡ : ಲಕ್ಷಾಂತರ ರೂ. ಮೌಲ್ಯದ ಸಾಮಾಗ್ರಿಗಳು ಸುಟ್ಟು ಭಸ್ಮ.

ಮಂಜೇಶ್ವರ : ಉಪ್ಪಳ ನಗರದ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಶುಕ್ರವಾರ ಮಧ್ಯಾಹ್ನ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಬಹುಮಹಡಿ ಶಾಪಿಂಗ್ ಕಾಂಪ್ಲೆಕ್ಸ್ ಕಟ್ಟಡದ ಪ್ರಥಮ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ “ಮಾಸ್ಟರ್ ಕಂಪ್ಯೂಟರ್ಸ್” ಎಂಬ ಸಂಸ್ಥೆಯಲ್ಲಿ ಬೆಂಕಿ ತಗುಲಿದ್ದು ಲಕ್ಷಾಂತರ ಮೌಲ್ಯದ ಸಾಮಾಗ್ರಿಗಳು ಹೊತ್ತಿ ನಾಶಗೊಂಡಿದೆ.ಮಾಹಿತಿ ಅರಿತು ಸ್ಥಳಕ್ಕೆ ಉಪ್ಪಳ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದ್ದಾರೆ.

ಅಗ್ನಿ ಅವಘಡದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಬೆಂಕಿ ವ್ಯಾಪಕವಾಗಿ ಹಬ್ಬಿದ ಪರಿಣಾಮ ಸ್ಥಳೀಯರಲ್ಲೂ ಆತಂಕ ಉಂಟಾಗಿದೆ. ಈ ಘಟನೆ ಹಿನ್ನೆಲೆಯಲ್ಲಿ ರೈಲ್ವೆ ನಿಲ್ದಾಣ ರಸ್ತೆಯ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಗಿತ್ತು. ಘಟನೆಯ ವಿವರ ತಿಳಿಯುತ್ತಿದ್ದಂತೆಯೇ ಹಲವರು ಸ್ಥಳಕ್ಕೆ ಧಾವಿಸಿ ಬರುತ್ತಿರುವ ದೃಶ್ಯ ಕಂಡು ಬಂತು. ಅವಘಡಕ್ಕೆ ಸಾರ್ಟ್ ಸರ್ಕ್ಯೂಟ್ ಕಾರಣವೆಂದು ಶಂಕಿಸಲಾಗಿದೆ.ಸ್ಥಿತಿಗತಿಗಳನ್ನು ನಿಯಂತ್ರಣಕ್ಕೆ ತರಲು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!