ಸ್ಕೂಟರ್ ಡಿವೈಡರ್ ಗೆ ಡಿಕ್ಕಿ : ಯುವಕನ ದಾರುಣ ಅಂತ್ಯ

ಮಂಜೇಶ್ವರ : ಕುಂಬಳೆ ರಾ.ಹೆದ್ದಾರಿಯಲ್ಲಿ ಸ್ಕೂಟರ್ ಡಿವೈಡರ್ ಗೆ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಶುಕ್ರವಾರ ರಾತ್ರಿ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ.

ಪಚ್ಚಂಬಳ ದೀನಾರ್ ನಗರದ ಮೊಹಮ್ಮದ್ ಹಾಗೂ ಖೈರುನ್ನಿಸಾ ದಂಪತಿಗಳ ಪುತ್ರ ಈಚು ಯಾನೆ ಯೂಸುಫ್ (20) ಸಾವನ್ನಪ್ಪಿದ ದುರ್ದೈವಿ.
ಅಪಘಾತ ನಡೆದ ಕೂಡಲೇ ಯುವಕನನ್ನು ಆಸ್ಪತ್ರೆಗೆ ತಲಪಿಸಿದರೂ ಜೀವವನ್ನು ರಕ್ಷಿಸಲು ಸಾಧ್ಯವಾಗಿಲ್ಲ.
ಶವ ಶರೀರವನ್ನು ಕುಂಬಳೆ ಸಹಕಾರಿ ಆಸ್ಪತ್ರೆಯ ಶವಗಾರದಲ್ಲಿಡಲಾಗಿದೆ.


ಶಿರಿಯಾ ಶಾಲೆಯಲ್ಲಿ ಓಣಂ ಹಬ್ಬದಲ್ಲಿ ಪಾಲ್ಗೊಂಡು ಸ್ನೇಹಿತನೊಬ್ಬನನ್ನು ಮೊಗ್ರಾಲಿನಲ್ಲಿ ಇಳಿಸಿ ಪಚ್ಚಂಬಳಕ್ಕೆ ಮರಳುತಿದ್ದ ದಾರಿ ಮಧ್ಯೆ ಈ ದುರ್ಘಟನೆ ಸಂಭವಿಸಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!