ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ, ಕುಂಜತ್ತೂರು ಪೀಸ್ ಕ್ರಿಯೇಟಿವ್ ಶಾಲೆಯಲ್ಲಿ ವಿವಿಧ ಕ್ರೀಡಾ – ಸಾಂಸ್ಕೃತಿಕ ಕಾರ್ಯಕ್ರಮ

ಮಂಜೇಶ್ವರ : ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಕೇರಳ ಗಡಿ ಪ್ರದೇಶದಲ್ಲಿರುವ ಕುಂಜತ್ತೂರು ಪೀಸ್ ಕ್ರಿಯೇಟಿವ್ ಶಾಲೆಯಲ್ಲಿ ವಿವಿಧ ಕ್ರೀಡಾ – ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು.

ಕಾರ್ಯಕ್ರಮಕ್ಕೆ ಶಾಲಾ ಪ್ರಾಂಶುಪಾಲ ಅಬ್ದುಲ್ ಖಾದರ್ ಚಾಲನೆ ನೀಡಿದರು. ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವನೆ, ದೈಹಿಕ ಆರೋಗ್ಯ ಮತ್ತು ತಂಡದ ಆತ್ಮವಿಶ್ವಾಸವನ್ನು ಹೆಚ್ಚಿಸುವ ಉದ್ದೇಶದಿಂದ ಹಮ್ಮಿಕೊಂಡ ಈ ದಿನಾಚರಣೆಯಲ್ಲಿ ಕ್ರೀಡಾ ಸ್ಪರ್ಧೆಗಳು, ವ್ಯಾಯಾಮ, ಓಟ, ವಾಲಿಬಾಲ್ ಮೊದಲಾದ ಹಲವು ಕ್ರೀಡಾ ಪಂದ್ಯಾವಳಿಗಳು ನಡೆಯಿತು.

ವಿದ್ಯಾರ್ಥಿಗಳೊಂದಿಗೆ ಶಿಕ್ಷಕರೂ ಕೆಲವು ಮನರಂಜನಾ ಆಟಗಳಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಇನ್ನಷ್ಟು ಆಕರ್ಷಕಗೊಳಿಸಿದರು.
ಕೊನೆಯಲ್ಲಿ ವಿಜೇತರಿಗೆ ಟ್ರೋಫಿಗಳನ್ನು ನೀಡಿ ಪ್ರೋತ್ಸಾಹಿಸಲಾಯಿತು.

ರಾಷ್ಟ್ರೀಯ ಕ್ರೀಡಾ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿದ ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಕ್ರೀಡೆಗೆ ಪ್ರೇರಣೆ ತುಂಬಿತು.

SHARE
Loading spinner

Leave a Reply

Your email address will not be published. Required fields are marked *

error: Content is protected !!