ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಕಾಸರಗೋಡು ಜಿಲ್ಲೆಯಲ್ಲೇ ಗಮನ ಸೆಳೆಯುತ್ತಿರುವ ಕುಂಜತ್ತೂರು ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಕೇಂದ್ರೀಯ ಶಾಲೆ

ಮಂಜೇಶ್ವರ: ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಕಾಸರಗೋಡು ಜಿಲ್ಲೆಯಲ್ಲೇ ಗಮನ ಸೆಳೆಯುತ್ತಿರುವ ಕುಂಜತ್ತೂರು ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಕೇಂದ್ರೀಯ ಶಾಲೆಯಲ್ಲಿ ಇತ್ತೀಚೆಗೆ “ಟ್ಯಾಲೆಂಟ್ ಹಂಟ್ ಡೇ” ಉತ್ಸವ ಸಂಭ್ರಮದಿಂದ ಆಚರಿಸಲಾಯಿತು. ಈ ವಿಶೇಷ ದಿನಾಚರಣೆಯ ಉದ್ದೇಶ, ವಿದ್ಯಾರ್ಥಿಗಳಲ್ಲಿರುವ ಅಡಗಿದ ಪ್ರತಿಭೆಗಳನ್ನು ಗುರುತಿಸಿ, ಅವುಗಳನ್ನು ಪ್ರೋತ್ಸಾಹಿಸುವುದಾಗಿತ್ತು.

ಈ ಸಂಭ್ರಮದಲ್ಲಿ ವಿದ್ಯಾರ್ಥಿಗಳು ನೃತ್ಯ, ಹಾಡು, ಚಿತ್ರಕಲೆ, ನಾಟಕ, ಭಾಷಣ, ಕರಾಟೆ ಹಾಗೂ ವಿವಿಧ ಕಲಾತ್ಮಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ತಮ್ಮ ವೈಯಕ್ತಿಕ ಪ್ರತಿಭೆಯನ್ನು ಮೆರೆದರು. ಪ್ರತಿ ತರಗತಿಯಿಂದ ವಿದ್ಯಾರ್ಥಿಗಳು ಭಾಗಿ ಆಗಿದ್ದು, ವೇದಿಕೆಯ ಮೇಲೆ ತಮ್ಮ ಸಾಮರ್ಥ್ಯವನ್ನು ಬಹಿರಂಗಪಡಿಸಿದ್ದರು.

ಈ ಹಿನ್ನೆಲೆಯಲ್ಲಿ ಸ್ಪರ್ಧೆಯಲ್ಲಿ ಭಾಗಿಯಾಗಿ ಉತ್ತಮ ಪ್ರದರ್ಶನ ನೀಡಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಬಹುಮಾನ ಹಾಗೂ ಪ್ರಮಾಣ ಪತ್ರಗಳನ್ನು ಗುರುವಾರದಂದು ವಿತರಿಸಲಾಯಿತು. ಶಾಲಾ ಪ್ರಾಂಶುಪಾಲರು, ಅಧ್ಯಾಪಕರು, ಆಡಳಿತ ಮಂಡಳಿ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದು, ವಿದ್ಯಾರ್ಥಿಗಳ ಹನ್ನೆರೆಯುತ್ತಿರುವ ಪ್ರತಿಭೆಗೆ ಮೆಚ್ಚುಗೆ ನೀಡಿದ್ದಾರೆ.ಶಾಲಾ ಪ್ರಾಂಶುಪಾಲರು ಮಾತನಾಡಿ “ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚಿಸುತ್ತವೆ. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಒಂದು ವಿಶೇಷ ಪ್ರತಿಭೆ ಅಡಗಿರುತ್ತದೆ. ನಾವು ಶಿಕ್ಷಕರಾಗಿ ಅದನ್ನು ಗುರುತಿಸಿ ಬೆಳಸುವ ಜವಾಬ್ದಾರಿ ಹೊತ್ತುಕೊಳ್ಳಬೇಕು,” ಎಂದು ಅವರು ಹೇಳಿದರು.ಈ ಸಂದರ್ಭ ಶಾಲೆಯ ಎಲ್ಲಾ ಶಿಕ್ಷಕರು, ಆಡಳಿತ ಮಂಡಳಿಯ ಸದಸ್ಯರು ಸೇರಿದಂತೆ ಎಲ್ಲರೂ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!