ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಅಸಾಮಿಯ ಬಂಧನ.

ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಅಸಾಮಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಕಾಸರಗೋಡು ಕುಂಬಳೆಯ‌ ಹನೀಫ್ ಎಂದು ಗುರುತಿಸಲಾಗಿದೆ.

ಮಂಗಳೂರು ಪೂರ್ವ ಪೊಲೀಸ್ ಠಾಣಾ ಅಕ್ರ: 135/2016 ಕಲಂ 323 324,354& 149 ಐಪಿಸಿ ಪ್ರಕರಣದಲ್ಲಿ ಮಂಗಳೂರಿನ 6ನೇ ಜೆಎಂಎಫ್ ಸಿ ನ್ಯಾಯಾಲಯದ ಸಿ ಸಿ ನಂಬರ್ 1059/2018 ರಂತೆ ವಿಚಾರಣೆಯಲ್ಲಿರುವ ಪ್ರಕರಣದಲ್ಲಿ ನ್ಯಾಯಾಲಯವು ಕಳೆದ ಒಂದು ವರ್ಷದಿಂದ 9 ಬಾರಿ ವಾರೆಂಟ್ ಹೊರಡಿಸಿದ್ದರೂ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.

ಹೀಗಾಗಿ ಈತನ ವಿರುದ್ಧ ನ್ಯಾಯಾಲಯದ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ ಬಗ್ಗೆ ಕಲಂ 269 ಬಿಎನ್ಎಸ್ 2023 ರಂತೆ ಈತನ ಪತ್ತೆಗಾಗಿ ಪ್ರಯತ್ನವನ್ನು ಮುಂದುವರಿಸಿದ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ವಾರೆಂಟ್ ಸಿಬ್ಬಂದಿಗಳಾದ ಎಎಸ್ಐ ಮಚೇಂದ್ರನಾಥ್ ಜೋಗಿ HC 865 ನೇ ನಾರಪ್ಪ ಕೆಬಿ ಇವರು ಆರೋಪಿತನನ್ನು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಕುಂಬಳೆಯಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲಯವು ಈತನಿಗೆ 4 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!