ಕಾರು ಹಾಗೂ ಬೈಕ್ ಪರಸ್ಪರ ಡಿಕ್ಕಿ . ಇಬ್ಬರು ಹೊರ ರಾಜ್ಯ ಕಾರ್ಮಿಕರು ಗಾಯ.

ಮಂಜೇಶ್ವರ : ಕಾರು ಹಾಗೂ ಬೈಕ್ ಪರಸ್ಪರ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಇಬ್ಬರು ಹೊರ ರಾಜ್ಯ ಕಾರ್ಮಿಕರು ಗಾಯಗೊಂಡಿದ್ದಾರೆ. ಈ ಪೈಕಿ ಒಬ್ಬನ ಸ್ಥಿತಿ ಚಿಂತಾಜನಕವಾಗಿದೆ. ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರು ಮತ್ತು ಕಾಸರಗೋಡು ಕಡೆಗೆ ಬರುತ್ತಿದ್ದ ಬೈಕ್‌ ನಡುವೆ ಅಪಘಾತ ಸಂಭವಿಸಿದೆ.

ಹೊಸಂಗಡಿ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.ಶುಕ್ರವಾರ ರಾತ್ರಿ ಘಟನೆ ನಡೆದಿದೆ. ಡಿಕ್ಕಿಯ ತೀವ್ರತೆಗೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಕಾರ್ಮಿಕರು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ.ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ

SHARE
Loading spinner

Leave a Reply

Your email address will not be published. Required fields are marked *

error: Content is protected !!