ಕುಂಜತ್ತೂರು ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಕೇಂದ್ರೀಯ ಶಾಲೆ .ಅರಬಿಕ್ ದಿನಾಚರಣೆ

ಮಂಜೇಶ್ವರ : ಒಂದಲ್ಲ ಒಂದು ವಿಷಯದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ವಿಭಿನ್ನತೆ ಮೂಡಿಸಿಕೊಂಡು ಗಮನ ಸೆಳೆಯುತ್ತಿರುವ ಕುಂಜತ್ತೂರು ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಕೇಂದ್ರೀಯ ಶಾಲೆಯಲ್ಲಿ ಗುರುವಾರದಂದು ಅರಬಿಕ್ ದಿನಾಚರಣೆಯನ್ನು ಅತ್ಯಂತ ವೈಭವಯುತವಾಗಿ ಆಚರಿಸಲಾಯಿತು.

ಈ ವಿಶೇಷ ಸಂದರ್ಭದಲ್ಲಿ ಸಂಪೂರ್ಣ ಶಾಲಾ ಆವರಣವನ್ನು ಅರಬ್ ನಾಗರೀಕತೆಯನ್ನು ನೆನಪಿಸುವ ರೀತಿಯಲ್ಲಿ ಅಲಂಕರಿಸಿ, ಅರಬ್ ದೇಶದ ಸಾಂಸ್ಕೃತಿಕ ವಾತಾವರಣವನ್ನು ನಿರ್ಮಿಸಲಾಯಿತು. ಕಾರ್ಯಕ್ರಮದ ವಿಶೇಷತೆ ಎಂದರೆ, ಸಂಪೂರ್ಣ ಕಾರ್ಯಕ್ರಮವನ್ನು ಅರಬ್ ಭಾಷೆಯಲ್ಲಿಯೇ ನಡೆಸಲಾಗಿದ್ದು, ವಿದ್ಯಾರ್ಥಿಗಳು ಅರಬ್ ಭಾಷೆಯ ಮೇಲಿನ ತಮ್ಮ ಪ್ರಾಮೀಣತೆಯನ್ನು ಅದ್ಭುತವಾಗಿ ಪ್ರದರ್ಶಿಸಿದರು.ಶಾಲಾ ಪ್ರಾಂಶುಪಾಲ ಅಬ್ದುಲ್ ಖಾದರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಶಾಲಾ ಚೇಯರ್ಮ್ಯಾನ್ ಹಾಜಿ ಅಬ್ದುಲ್ ರಹ್ಮಾನ್ ಅರಿಮಲ ಉಪಸ್ಥಿತರಿದ್ದರು.

ಈ ಕಾರ್ಯಕ್ರಮದ ಪೂರ್ವಭಾವಿಯಾಗಿ ತಾಲೂಕು ಮಟ್ಟದಿಂದ ಆಯ್ಕೆಗೊಂಡ ಸಿ ಬಿ ಎಸ್ ಇ ಹಾಗೂ ರಾಜ್ಯ ಪಠ್ಯ ಕ್ರಮದ ಅಂತರಶಾಲಾ ವಿದ್ಯಾರ್ಥಿಗಳಿಂದ ಇದೇ ಶಾಲೆಯಲ್ಲಿ ಕುರಾನ್ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು.ಅರಬಿಕ್ ಭಾಷಣ, ನಾಟಕ, ಕವಿತಾ ಪಠಣ, ಹಾಡುಗಳು ಹಾಗೂ ಸಾಂಸ್ಕೃತಿಕ ಪ್ರದರ್ಶನಗಳು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿದವು. ವಿದ್ಯಾರ್ಥಿಗಳ ಕಲಾತ್ಮಕ ಪ್ರದರ್ಶನಗಳು ಪ್ರೇಕ್ಷಕರ ಮನಗೆದ್ದುವು. ಇದರೊಂದಿಗೆ ಅರಬ್ ಸಂಸ್ಕೃತಿ, ಇತಿಹಾಸ ಹಾಗೂ ಭಾಷೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಉದ್ದೇಶ ಈ ಕಾರ್ಯಕ್ರಮದ ಮೂಲಕ ಯಶಸ್ವಿಯಾಗಿ ನೆರವೇರಿತು.

ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ಪೋಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಹಾರೈಸಿದರು. ಇಂತಹ ನವೀನ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಾಸಕ್ಕೆ ಪೀಸ್ ಕ್ರಿಯೇಟಿವ್ ಶಾಲೆ ಸದಾ ಆದ್ಯತೆ ನೀಡುತ್ತಿದೆ ಎಂದು ಶಾಲಾ ಮುಖ್ಯಸ್ಥರು ತಿಳಿಸಿದರು.ಅರಬಿಕ್ ದಿನಾಚರಣೆ ಶಾಲೆಯ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಹೊಸ ಆಯಾಮವನ್ನು ನೀಡಿದ್ದು, ಎಲ್ಲರ ಪ್ರಶಂಸೆಗೆ ಪಾತ್ರವಾಯಿತು.ಅರಬಿಕ್ ಅಧ್ಯಾಪಕರುಗಳಾದ ಮೊಹಮ್ಮದ್ ಶಮೀರ್, ಮೊಹಮ್ಮದ್ ಬಿಲಾಲ್ ಹಾಗೂ ಮೊಹಮ್ಮದ್ ಉಸ್ಮಾನ್ ಕಾರ್ಯಕ್ರಮಕ್ಕೆ ನೇತೃತ್ವ ನೀಡಿದರು.

SHARE
Loading spinner

One thought on “ಕುಂಜತ್ತೂರು ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಕೇಂದ್ರೀಯ ಶಾಲೆ .ಅರಬಿಕ್ ದಿನಾಚರಣೆ

  1. Alright mate, 7gbet’s got a decent selection. Been having a bit of a punt there myself. Nothing too crazy mind you, just a bit of fun. Worth a look if you’re after a new spot. Check it out here: 7gbet

    Loading spinner

Leave a Reply

Your email address will not be published. Required fields are marked *

error: Content is protected !!