ಕಾಸರಗೋಡು: ವಚನಕಾರ್ತಿ ಸಮಾಜಸೇವಕಿ ಶಿವಶರಣಿ ರೂಪಾ ಬಿ. ನಾಟೀಕಾರ ರೀಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಪ್ರಶಸ್ತಿ 2026.” ನ್ನು ಜನವರಿ 18 ರಂದು ಕನ್ನಡ ಭವನ ರಜತ ಸಂಭ್ರಮ -ನಾಡು ನುಡಿ ಹಬ್ಬ ಕಾರ್ಯಕ್ರಮ ದಲ್ಲಿ, ಕನ್ನಡ ಭವನ, ನುಳ್ಳಿಪ್ಪಾಡಿ, ಕಾಸರಗೋಡಿ ನಲ್ಲಿ ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ತಿಳಿಸಿದ್ದಾರೆ.