ಮಂಜೇಶ್ವರ : ಅಪ್ರಾಪ್ತ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಮದ್ರಸಾ ಅಧ್ಯಾಪಕನಿಗೆ ಹೊಸದುರ್ಗ ಪೋಕ್ಸೋ ವಿಶೇಷ ನ್ಯಾಯಾಲಯ 14 ವರ್ಷ ಕಠಿಣ ಸಜೆ ಹಾಗೂ 40,000 ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಕಿದೂರು ನಿವಾಸಿ ಎ. ಅಬ್ದುಲ್ ಹಮೀದ್ (46) ಶಿಕ್ಷಗೊಳಗಾದ ಆರೋಪಿ. ಜುಲ್ಮಾನೆ ಪಾವತಿಸದಿದ್ದಲ್ಲಿ ಆರೋಪಿ ಒಂದು ವರ್ಷ ಮೂರು ತಿಂಗಳು ಹೆಚ್ಚು ವರಿ ಸಜೆ ಅನುಭವಿಸಬೇಕಾಗಿದೆಯೆಂದು ತೀರ್ಪಿನಲ್ಲಿ ತಿಳಿಸಲಾಗಿದೆ.
ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಗೊಳಪಟ್ಟ ಪ್ರದೇಶದ ನಿವಾಸಿಯಾಗಿರುವ 12 ವರ್ಷದ ಬಾಲಕಿಗೆ 2023 ನವಂಬರ್‌ನಲ್ಲಿ ಹಲವು ಬಾರಿ ಮದ್ರಸಾ ತರಗತಿಯ ಕೊಠಡಿಯಲ್ಲಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ ನೀಡಲಾದ ದೂರಿನಂತೆ ಕುಂಬಳೆ ಪೊಲೀಸರು ಆರೋಪಿಯ ವಿರುದ್ಧ ಪೋಕ್ಸೋ ಕಾನೂನು ಪ್ರಕಾರ ಪ್ರಕರಣ ದಾಖಲಿಸಿ ಕೊಂಡಿದ್ದರು.