ಶಾಲೆಯಲ್ಲಿ ಮಧ್ಯಾಹ್ನದ ಊಟ ತಯಾರಿಸುವಾಗ ಸ್ಟೌವ್‌ನಿಂದ ಆಕಸ್ಮಿಕವಾಗಿ ಬೆಂಕಿ ತಗುಲಿ ಅಡುಗೆ ನೌಕರೆ, ಉದ್ಯಾವರ ಮಾಡ ನಿವಾಸಿ ಜಯ (56) ಮೃತ್ಯು

ಮಂಜೇಶ್ವರ: ಬಂಗ್ರ ಮಂಜೇಶ್ವರ ಸರಕಾರಿ ಶಾಲೆಯಲ್ಲಿ ಮಧ್ಯಾಹ್ನದ ಊಟ ತಯಾರಿ ಮಾಡುವ ವೇಳೆ ಸ್ಟವ್ ನಿಂದ ಬೆಂಕಿ ತಗುಲಿ ಗಂಭೀರ ಸುಟ್ಟು ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಡುಗೆಯಾಳು ಮೃತಪಟ್ಟ ಘಟನೆ ನಿನ್ನೆ ರಾತ್ರಿ ನಡೆದಿದೆ.ಬಂಗ್ರ ಮಂಜೇಶ್ವರ ಸರಕಾರಿ ಹೈಸ್ಕೂಲಿನ ಅಡುಗೆ ನೌಕರೆ, ಉದ್ಯಾವರ ಮಾಡ ನಿವಾಸಿ ಜಯ (56) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಗಂಭೀರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಅವರು ನಿನ್ನೆ ರಾತ್ರಿ ನಿಧನರಾದರು. ಕಳೆದ ಡಿಸೆಂಬರ್ 16 ರಂದು ಇವರು ಬೆಂಕಿ ಸುಟ್ಟು ಗಾಯಗೊಂಡಿದ್ದರು. ಶಾಲಾ ಅಡುಗೆ ಕೋಣೆಯಲ್ಲಿ ಅಡುಗೆ ಮಾಡುತ್ತಿದ್ದಾಗ ಘಟನೆ ಸಂಭವಿಸಿತ್ತು. ಇವರ ಬೊಬ್ಬೆ ಕೇಳಿ ಅಧ್ಯಾಪಕರು ಧಾವಿಸಿ ಬಂದು ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರು. ಕಳೆದ 20 ವರ್ಷಗಳಿಂದ ಶಾಲೆಯಲ್ಲಿ ಅಡುಗೆ ಮಾಡುತ್ತಿದ್ದ ಇವರ ನಿಧನ ಸುದ್ದಿ ತಿಳಿದು ಶಾಲೆಯ ಅಧ್ಯಾಪಕ ವೃಂದ ಮತ್ತು ವಿದ್ಯಾರ್ಥಿ ವೃಂದ, ಹೆತ್ತವರಿಗೆ ಗಾಢ ದುಃಖವನ್ನುಂಟುಮಾಡಿದೆ. ಮೃತರು ಪತಿ: ಹರಿಣಾಕ್ಷ, ಮಕ್ಕಳಾದ: ಹಿತೇಷ್, ಪ್ರಸನ್ನ, ಗಣೇಶ್, ದೀಪ, ಅಳಿಯ ಸುರೇಶ್ ಎಂಬಿವರನ್ನು ಅಗಲಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!