ಮಂಜೇಶ್ವರ, ಜುಲೈ 20: ಮಂಜೇಶ್ವರ ಸಾರ್ವಜನಿಕ ಶ್ರೀ ಗಣೇಶೋತ್ಸವದ ಮಹಾಸಭೆಯು ನಿನ್ನೆ ಸಂಜೆ 4 ಗಂಟೆಗೆ ಹೊಸಂಗಡಿ ಶ್ರೀ ಅಯ್ಯಪ್ಪ ಕ್ಷೇತ್ರದಲ್ಲಿ ಯಶಸ್ವಿಯಾಗಿ ನಡೆಯಿತು.


ಸಭೆಯಲ್ಲಿ ಕಳೆದ ಸಾಲಿನ ವರದಿ ವಾಚನ, 45ನೇ ವರ್ಷದ ಲೆಕ್ಕಪತ್ರ ಮಂಡನೆ ಹಾಗೂ 46ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕಾಗಿ ನೂತನ ಆಡಳಿತ ಸಮಿತಿಯ ಆಯ್ಕೆ ಪ್ರಕ್ರಿಯೆ ನೆರವೇರಿತು.


46ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಯಾದವ ಬಡಾಜೆ, ಪ್ರಧಾನ ಕಾರ್ಯದರ್ಶಿಯಾಗಿ ಕಮಲಾಕ್ಷ ತೂಮಿನಾಡು ಹಾಗೂ ಕೋಶಾಧಿಕಾರಿಯಾಗಿ ಅಶೋಕ್ ದೇವಾಡಿಗ ಆಯ್ಕೆಯಾಗಿದ್ದಾರೆ.


ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರು ಹಾಗೂ ಗಣ್ಯರು ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿ, ಮುಂಬರುವ ಗಣೇಶೋತ್ಸವವನ್ನು ಯಶಸ್ವಿಯಾಗಿ ಆಯೋಜಿಸಲು ಸಹಕಾರ ನೀಡುವಂತೆ ಕರೆ ನೀಡಿದರು.

ಈ ವರ್ಷದ 46ನೇ ಸಾರ್ವಜನಿಕ ಮಂಜೇಶ್ವರ ಶ್ರೀ ಗಣೇಶೋತ್ಸವವು ಸೆಪ್ಟೆಂಬರ್ 14ರಿಂದ 17ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳೊಂದಿಗೆ ಬಹು ವಿಜೃಂಭಣೆಯಿಂದ ನಡೆಯಲಿದೆ ಎಂದು ಸಮಿತಿ ತಿಳಿಸಿದೆ.


