ಹವಾಮಾನ ವೈಪರೀತ್ಯ ಮತ್ತು ಕೃಷಿ: ಹೊಸಂಗಡಿಯಲ್ಲಿ ವಿಚಾರಗೋಷ್ಠಿ ಹಾಗೂ ಕೃಷಿಕರೊಂದಿಗೆ ಸಂವಾದ

ಮಂಜೇಶ್ವರ: ಕೇರಳ ರೈತಸಂಘದ ಕಾಸರಗೋಡು ಜಿಲ್ಲಾ ಸಮ್ಮೇಳನದ ಅಂಗವಾಗಿ ಹೊಸಂಗಡಿಯಲ್ಲಿ “ಹವಾಮಾನ ವೈಪರೀತ್ಯ ಮತ್ತು ಕೃಷಿ ವಲಯ” ಎಂಬ ವಿಷಯದ ಕುರಿತು ವಿಚಾರಗೋಷ್ಠಿ ಹಾಗೂ ಕೃಷಿಕರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು.

ರೈತಸಂಘದ ರಾಜ್ಯ ಸಮಿತಿ ಸದಸ್ಯ ಕೆ.ಆರ್. ಜಯಾನಂದ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕೃಷಿ ವಿಜ್ಞಾನ ಕೇಂದ್ರದ ಸಂಶೋಧಕ ಡಾ. ವಿಕ್ರಮ್ ನಾಯಕ್ ವಿಷಯ ಮಂಡಿಸಿದರು.

ಏರಿಯಾ ಕಾರ್ಯದರ್ಶಿ ಅಶೋಕ ಭಂಡಾರಿ ಸ್ವಾಗತಿಸಿದರು. ಏರಿಯಾ ಸಮಿತಿ ಅಧ್ಯಕ್ಷ ಬಿ.ಎಂ. ಕರುಣಾಕರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಮಿತಿ ಸದಸ್ಯೆ ಗೀತಾ ಸಾಮಾನಿ ಸೇರಿದಂತೆ ರೈತರು ಹಾಗೂ ಸಂಘದ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಹವಾಮಾನ ವೈಪರೀತ್ಯದಿಂದ ಕೃಷಿ ಕ್ಷೇತ್ರ ಎದುರಿಸುತ್ತಿರುವ ಸವಾಲುಗಳು ಹಾಗೂ ಕೃಷಿಕರ ಸಮಸ್ಯೆಗಳ ಕುರಿತು ಕಾರ್ಯಕ್ರಮದಲ್ಲಿ ಚರ್ಚೆ ನಡೆಯಿತು.

SHARE
Loading spinner

Leave a Reply

Your email address will not be published. Required fields are marked *

error: Content is protected !!