ಮಂಜೇಶ್ವರ: ಉಪ್ಪಳ ಸಮೀಪದ ಮುಸೋಡಿ ಕಡಪ್ಪುರ ಪ್ರದೇಶದಲ್ಲಿ ಅಜ್ಞಾತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿರುವ ಘಟನೆ ಶನಿವಾರ ಬೆಳಕಿಗೆ ಬಂದಿದೆ.

ಸ್ಥಳೀಯರು ಶವವನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

ಶವವನ್ನು ಮರಣೋತ್ತರ ಪರೀಕ್ಷೆ ಹಾಗೂ ಗುರುತಿನ ಪತ್ತೆಗಾಗಿ ಉಪ್ಪಳ ಮಂಗಲ್ಪಾಡಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ.
ಮೃತ ವ್ಯಕ್ತಿಯ ಗುರುತು ಹಾಗೂ ಸಾವಿನ ನಿಖರ ಕಾರಣ ತಿಳಿದುಬರಬೇಕಿದ್ದು, ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

