ಮಂಜೇಶ್ವರ: ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಉದ್ಯಾವರ ಜೆ ಎಂ ರಸ್ತೆಯಲ್ಲಿರುವ ಮನೆಯಲ್ಲಿ ದೊಡ್ಡ ಮಟ್ಟದ ಕಳ್ಳತನ ನಡೆದಿದೆ.
ಜೆ.ಎಂ ರಸ್ತೆಯಲ್ಲಿರುವ ‘ನೈಮಾ ಕಾಟೇಜ್’ ಎಂಬ ಮನೆಯಲ್ಲಿ ಈ ಕೃತ್ಯ ನಡೆದಿದ್ದು, ಮನೆ ಮಾಲಕಿ ಫಾತಿಮತ್ ಸೌರಾ ನೀಡಿದ ದೂರಿನ ಮೇರೆಗೆ ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಜುಲೈ 12ರ ಸಂಜೆ 5:30ರಿಂದ 17ರ ರಾತ್ರಿ 12:00 ಗಂಟೆಯ ನಡುವಿನ ಅವಧಿಯಲ್ಲಿ ಈ ಕಳ್ಳತನ ನಡೆದಿದೆ ಎಂದು ಶಂಕಿಸಲಾಗಿದೆ.
ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು, ಮಲಗುವ ಕೋಣೆಯಲ್ಲಿದ್ದ ಅಲ್ಮೇರಾವನ್ನು ಬಲವಂತವಾಗಿ ಒಡೆದು ಅದರಲ್ಲಿದ್ದ ಆಭರಣಗಳನ್ನು ದೋಚಿದ್ದಾರೆ.

ಒಟ್ಟು 24 ಲಕ್ಷ ರೂಪಾಯಿ ಮೌಲ್ಯದ ನಷ್ಟ ಉಂಟಾಗಿರುವುದಾಗಿ ಅಂದಾಜಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಮುಂದುವರಿಸಿದ್ದಾರೆ.

