ಮಂಜೇಶ್ವರ: ಎಂದಿನಂತೆ ಕೆಲಸಕ್ಕೆಂದು ಮನೆಯಿಂದ ಹೊರಟ ಯುವತಿಯೊಬ್ಬಳು ನಾಪತ್ತೆಯಾಗಿದ್ದಾಳೆ. ಈ ಕುರಿತು ಯುವತಿಯ ತಾಯಿ ಮಂಜೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪೈವಳಿಕೆ ಆಜಾದ್‌ನಗರ ನಿವಾಸಿ ಫಾತಿಮತ್ ಮಕ್ನಾಸ್ (19) ನಾಪತ್ತೆಯಾದ ದುರ್ದೈವಿ. ಈಕೆ ಉಪ್ಪಳದ ಖಾಸಗಿ ವ್ಯಾಪಾರ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದಳು. ಎಂದಿನಂತೆ ಬುಧವಾರ ಬೆಳಿಗ್ಗೆ ಯುವತಿ ಮನೆಯಿಂದ ಕೆಲಸಕ್ಕೆ ತೆರಳಿದ್ದಳು. ಆದರೆ, ಸಂಜೆ ಎಷ್ಟು ಹೊತ್ತಾದರೂ ಮರಳಿ ಮನೆಗೆ ಬಾರದಿರುವುದನ್ನು ಕಂಡು ಆತಂಕಗೊಂಡ ಕುಟುಂಬಸ್ಥರು ಎಲ್ಲಾ ಕಡೆಗಳಲ್ಲಿ ಹುಡುಕಾಟ ನಡೆಸಿದ್ದಾರೆ. ಎಲ್ಲಿಯೂ ಪತ್ತೆಯಾಗದ ಹಿನ್ನೆಲೆಯಲ್ಲಿ ತಾಯಿ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

