ಚಕ್ರವರ್ತಿ (ರಿ.) ಹೊಸಂಗಡಿ ಕಾರ್ಯಾಲಯದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಚಕ್ರವರ್ತಿ (ರಿ.) ಹೊಸಂಗಡಿ ಸಂಸ್ಥೆಯ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಲೆ ,ಕ್ರೀಡೆಗಳಿಗೆ ಪ್ರೋತ್ಸಾಹ ಮತ್ತು ಸಾಮಾಜಿಕ , ಸಹಾಯ ,ವಿದ್ಯೆಗೆ ಮನ್ನಣೆ ನೀಡುತ್ತಿರುವ ಚಕ್ರವರ್ತಿ (ರಿ.) ಹೊಸಂಗಡಿ ಕಾರ್ಯಾಲಯದಲ್ಲಿ ನಡೆದ ಸ್ವಾತಂತ್ರ್ಯೋತ್ಸವದಲ್ಲಿ ನಿವೃತ್ತ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಗಾಯತ್ರಿ ಅವರು ಧ್ವಜಾರೋಹಣ ನೆರವೇರಿಸಿದರು.


ಸಂಸ್ಥೆಯ ಅಧ್ಯಕ್ಷರಾದ ಸುರೇಶ್ ಗಾನಿಂಜಾಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷರಾದ ಅನಿಲ್ ಅಂಗಡಿಪದವು, ಕಾರ್ಯದರ್ಶಿ ಶಿವಪ್ರಸಾದ್ ಪೆಲಪಾಡಿ ಹಾಗೂ ಕೋಶಾಧಿಕಾರಿ ಅಶೋಕ್ ಅಂಗಡಿಪದವು ಉಪಸ್ಥಿತರಿದ್ದರು.


ದಿನಕರ ಹೊಸಂಗಡಿ ಅವರು ಸ್ವಾಗತಿಸಿ, ಕಾರ್ಯಕ್ರಮದ ಕೊನೆಯಲ್ಲಿ ಧನ್ಯವಾದ ಅರ್ಪಿಸಿದರು. ತಾರಾನಾಥ್ ಗುರಿಕಾರರು, ಹಾಗೂ ಸಂಸ್ಥೆಯ ಸದಸ್ಯರು ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಕ್ಕಳಿಗೆ ಪುಸ್ತಕ ಹಾಗೂ ಕಿಟ್‌ಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ತಿಂಡಿ ವ್ಯವಸ್ಥೆಯನ್ನೂ ಮಾಡಲಾಗಿತ್ತು.
ದೇಶಭಕ್ತಿ, ಸಾಮಾಜಿಕ ಕಾಳಜಿ ಹಾಗೂ ಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡುವ ಸಂದೇಶದೊಂದಿಗೆ ಕಾರ್ಯಕ್ರಮವು ಅರ್ಥಪೂರ್ಣವಾಗಿ ನಡೆಯಿತು.

SHARE
Loading spinner

Leave a Reply

Your email address will not be published. Required fields are marked *

error: Content is protected !!