ಹೊಸಂಗಡಿ: ಚಕ್ರವರ್ತಿ (ರಿ.) ಹೊಸಂಗಡಿ ಸಂಸ್ಥೆ ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಪ್ರಥಮ ಬಾರಿಗೆ ಆಯೋಜಿಸಲಾದ ‘ಆಷಾಢ ಕೂಟ’ ಕಾರ್ಯಕ್ರಮವು ಚಕ್ರವರ್ತಿ ಸಂಸ್ಥೆಯ ಆವರಣದಲ್ಲಿ ಸಂಭ್ರಮದಿಂದ ನಡೆಯಿತು.

.
ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ 9 ಗಂಟೆಗೆ ಮಕ್ಕಳಿಗಾಗಿ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಬಳಿಕ ಪ್ರಾರ್ಥನೆಯೊಂದಿಗೆ ಸಭಾ ಕಾರ್ಯಕ್ರಮ ಆರಂಬಿಸಲಾಯಿತು.

ಸುರೇಶ್ ಗಾನಿಂಜಾಲ್ ಅವರ ಅದ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ 46 ವರ್ಷಗಳನ್ನು ಪೂರೈಸಿ 47ನೇ ವರ್ಷದ ಸಂಭ್ರಮದಲ್ಲಿರುವ ಸಂಸ್ಥೆಯು ಹಿನ್ನೋಟ ಮತ್ತು ಮುನ್ನೋಟದ ಬಗ್ಗೆ ಸಂಸ್ಥೆಯ ಕಾರ್ಯದರ್ಶಿ ಶಿವಪ್ರಸಾದ್ ಪೆಲಪ್ಪಾಡಿ ತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ ಪ್ರಸ್ತಾಪಿಸಿ ಎಲ್ಲರಿಗೂ ಸ್ವಾಗತ ಕೋರಿದರು.


ನಾಡಿನಾದ್ಯಂತ ಧಾರ್ಮಿಕ, ಸಾಮಾಜಿಕ ಹಾಗೂ ಯೋಗ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಯೋಗಾಚಾರ್ಯ ಪುಡರೀಕಾಕ್ಷ ಬೆಳ್ಳೂರು ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು
ಆಷಾಢ ಮಾಸದ ಮಹತ್ವ . ವಿವಿಧ ಋತುಗಳಲ್ಲಿ ಹಾಗೂ ತಿಂಗಳುಗಳಲ್ಲಿ ಆರೋಗ್ಯಕರ ಆಹಾರ ಪದ್ಧತಿಯನ್ನು ಅನುಸರಿಸುವ ಕುರಿತು ಅವರು ಸಲಹೆ ನೀಡಿದರು.

ಇಂತಹ ಆರೋಗ್ಯಪೂರ್ಣ ಕಾರ್ಯಕ್ರಮಗಳನ್ನು ಮುಂದಿನ ವರ್ಷಗಳಲ್ಲೂ ಆಯೋಜಿಸುವ ಮೂಲಕ ಸಮಾಜದ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಅವರು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಕನಿಲ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪದ್ಮನಾಭ ಕಡಪ್ಪರ, ಶ್ರೀ ಅಯ್ಯಪ್ಪ ಕ್ಷೇತ್ರದ ಅಧ್ಯಕ್ಷ ನವೀನ್ ರಾಜ್ ಕೆ.ಜೆ., ಶ್ರೀ ಆದಿಕ್ಷೇತ್ರ ರಕ್ಷೇಶ್ವರಿ ದೇವಸ್ಥಾನದ ಪ್ರಧಾನ ಮುಖ್ಯಸ್ಥ ಪದ್ಮನಾಭ ಬಾಡೂರು, ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಯಾದವ ಬಡಾಜೆ, ಶಾರದಾ ಆರ್ಟ್ಸ್ ಮೂಲಕ ನಾಟಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಕೃಷ್ಣ ಜಿ. ಮಂಜೇಶ್ವರ, ಕಾಳಿಕಾಪರಮೇಶ್ವರಿ ಕ್ಷೇತ್ರದ ಮಹಿಳಾ ಸಂಘದ ಅಧ್ಯಕ್ಷೆ ಡಾ. ಪ್ರಿಯ ನಾಗರಾಜ್ ಹಾಗೂ ಸಂಸ್ಥೆಯ ಗೌರವ ಮಾರ್ಗದರ್ಶಕ ಅನಿಲ್ ಅಂಗಡಿಪದವು ಸೇರಿದಂತೆ ಹಲವರು ಉಪಸ್ಥಿತರಿದ್ದರು.


ಕಾರ್ಯಕ್ರಮದ ಅಂಗವಾಗಿ ಸ್ಥಳೀಯ ಮಕ್ಕಳಿಂದ ವಿವಿಧ ಸಾಂಸ್ಕೃತಿಕ, ನೃತ್ಯ ಕಾರ್ಯಕ್ರಮಗಳು ನಡೆದವು. ನಂತರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ವಿತರಿಸಲಾಯಿತು.
ಸೇವಾರತ್ನ ಪುರಸ್ಕೃತ, ಸಂಘಟಕ ಹಾಗೂ ವಾಗ್ಮಿ ಹರೀಶ್ ಶೆಟ್ಟಿ ಮಾಡ ಅವರು ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹಾಗೂ ಚಕ್ರವರ್ತಿ ಸಂಸ್ಥೆಯ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.



