ಕುಂಬಳೆ ಪಂಚಾಯತ್ ಕಚೇರಿಯಲ್ಲಿ ವಿಜಿಲೆನ್ಸ್ ದಾಳಿ: ಅನಧಿಕೃತ ಕಟ್ಟಡ ನಿರ್ಮಾಣದ ಬಗ್ಗೆ ತನಿಖೆ

​ ಮಂಜೇಶ್ವರ: ಪರವಾನಗಿಗಿಂತ ಹೆಚ್ಚಿನ ವಿಸ್ತೀರ್ಣದಲ್ಲಿ ಕಟ್ಟಡ ನಿರ್ಮಿಸಿ ಪಂಚಾಯತ್‌ಗೆ ಆದಾಯ ನಷ್ಟ ಉಂಟುಮಾಡಿದ ಆರೋಪದ ಮೇರೆಗೆ ಕುಂಬಳೆ ಗ್ರಾಮ ಪಂಚಾಯತ್ ಕಚೇರಿಯಲ್ಲಿ ವಿಜಿಲೆನ್ಸ್ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.

ಕಾಸರಗೋಡು ವಿಜಿಲೆನ್ಸ್ ಮತ್ತು ಆಂಟಿ ಕರಪ್ಷನ್ ಬ್ಯೂರೋ ಡಿವೈಎಸ್ಪಿ ವಿ.ಕೆ. ವಿಶ್ವಂಬರನ್ ನಾಯರ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಯುತ್ತಿದೆ.

​ಅನುಮೋದಿತ ಮಿತಿಯನ್ನು ಮೀರಿ ದೊಡ್ಡ ಪ್ರಮಾಣದಲ್ಲಿ ಕಟ್ಟಡ ನಿರ್ಮಿಸಿರುವ ಕುರಿತು ಬಂದ ದೂರಿನ ಹಿನ್ನೆಲೆಯಲ್ಲಿ ವಿಜಿಲೆನ್ಸ್ ಇಲಾಖೆ ಈ ಹಿಂದೆ ಪ್ರಾಥಮಿಕ ತನಿಖೆ ನಡೆಸಿತ್ತು.

ಇದರ ಮುಂದುವರಿದ ಭಾಗವಾಗಿ ಇಂದು ಕಚೇರಿಯ ದಾಖಲೆಗಳನ್ನು ಪರಿಶೀಲಿಸಿ ದಾಖಲೆಗಳನ್ನು ಕಲೆಹಾಕಲಾಗುತ್ತಿದೆ. ಈ ಅಕ್ರಮದ ಹಿಂದೆ ಅಧಿಕಾರಿಗಳ ಶಾಮೀಲಾತಿ ಇದೆಯೇ ಎಂಬ ಬಗ್ಗೆಯೂ ತನಿಖೆ ಮುಂದುವರಿದಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!