ಮಂಜೇಶ್ವರ ತಾಲೂಕು ಗ್ರಂಥಾಲಯ ಸಮಿತಿಯ ವತಿಯಿಂದ ಓಣಂ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.ಕಾರ್ಯಕ್ರಮವನ್ನು ರಾಜ್ಯ ಲೈಬ್ರರಿ ಕೌನ್ಸಿಲ್ ಸದಸ್ಯರಾದ ದಾಸಪ್ಪ ಶೆಟ್ಟಿ ಮಾಸ್ತರ್ ಉದ್ಘಾಟಿಸಿದರು. ತಾಲೂಕು ಗ್ರಂಥಾಲಯ ಸಮಿತಿ ಅಧ್ಯಕ್ಷೆ ಶ್ರೀಕುಮಾರಿ ಟೀಚರ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಡಿ. ಕಮಲಾಕ್ಷ ಸ್ವಾಗತಿಸಿದರು.


ಕಾರ್ಯಕ್ರಮದ ಅಂಗವಾಗಿ ಗ್ರಂಥಪಾಲಕರ ಹಾಗೂ ಗ್ರಂಥಪಾಲಕಿಯರ ಮಕ್ಕಳ ಪೈಕಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉನ್ನತ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಬಶೀರ್ ಕೊಟ್ಟೂಡಲ್ ಹಾಗೂ ಶ್ಯಾಮ ಭಟ್ ಮಾಸ್ತರ್ ಕಾರ್ಯಕ್ರಮದಲ್ಲಿ ಮಾತನಾಡಿದರು. ಗ್ರಂಥಾಲಯ ಸಮಿತಿ ಸದಸ್ಯರು, ಗ್ರಂಥಪಾಲಕರು ಹಾಗೂ ಕುಟುಂಬಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.



