ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಗಂಭೀರ

​ಮಂಜೇಶ್ವರ: ವೈದ್ಯರೊಬ್ಬರು ಚಲಾಯಿಸುತ್ತಿದ್ದ ಕಾರು ಹಾಗೂ ಬೈಕ್ ಪರಸ್ಪರ ಭೀಕರವಾಗಿ ಡಿಕ್ಕಿ ಹೊಡೆದ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಮಂಜೇಶ್ವರದಲ್ಲಿ ನಡೆದಿದೆ.

​ತಲಪಾಡಿ ಭಾಗದಿಂದ ಬರುತ್ತಿದ್ದ ಡಾಕ್ಟರ್ ಜಯಪಾಲ್ ಶೆಟ್ಟಿ ಅವರ ಕಾರು ಹಾಗೂ ಕುಂಜತ್ತೂರು ಭಾಗದಿಂದ ತಲಪಾಡಿ ಕಡೆಗೆ ಸಾಗುತ್ತಿದ್ದ ಬೈಕ್ ನಡುವೆ ಈ ಅಪಘಾತ ಸಂಭವಿಸಿದೆ.

ಡಿಕ್ಕಿಯ ರಭಸಕ್ಕೆ ಬೈಕ್ ಹಾಗೂ ಕಾರಿನ ಮುಂಭಾಗ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.

​ಈ ಅಪಘಾತದಲ್ಲಿ ಕುಂಜತ್ತೂರು ನಿವಾಸಿ ನಿಯಾಸ್ (ಬೈಕ್ ಸವಾರ) ಗಂಭೀರ ಗಾಯಗೊಂಡಿದ್ದು, ತಕ್ಷಣವೇ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

​ಘಟನಾ ಸ್ಥಳಕ್ಕೆ ಹೈವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೀಡಾದ ಎರಡೂ ವಾಹನಗಳನ್ನು ವಶಕ್ಕೆ ಪಡೆದು ಮಂಜೇಶ್ವರ ಪೊಲೀಸ್ ಠಾಣೆಗೆ ಕೊಂಡೊಯ್ದಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!