ಶ್ರೀ ಅಯ್ಯಪ್ಪ ಫ್ರೆಂಡ್ಸ್ ಕ್ಲಬ್ (ರಿ.), ಶ್ರೀ ಅಯ್ಯಪ್ಪ ಕ್ಷೇತ್ರ, ಹೊಸಂಗಡಿ, ಮಂಜೇಶ್ವರ ವತಿಯಿಂದ ಪ್ರತಿವರ್ಷದಂತೆ ಈ ಬಾರಿಯೂ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ 15ನೇ ವರ್ಷದ ಮೊಸರು ಕುಡಿಕೆ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ.


ಸೆಪ್ಟೆಂಬರ್ 4ರಂದು ಬೆಳಗ್ಗೆ 8.30ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಳ್ಳಲಿವೆ. ಬೆಳಗ್ಗೆ ಗಣಹೋಮ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆಯಲಿವೆ.ಮಧ್ಯಾಹ್ನ 12.30ಕ್ಕೆ ಅನ್ನಸಂತರ್ಪಣೆ ಆಯೋಜಿಸಲಾಗಿದೆ.


ಇನ್ನು ಮಧ್ಯಾಹ್ನ 2 ಗಂಟೆಯಿಂದ ಕೃಷ್ಣ ವೇಷ ಸ್ಪರ್ಧೆ ಹಾಗೂ ರಾಧಾ-ಕೃಷ್ಣ ಸ್ಪರ್ಧೆ ಸೇರಿದಂತೆ ವಿವಿಧ ಸ್ಪರ್ಧೆಗಳು ನಡೆಯಲಿವೆ.
ಇದರ ಜೊತೆಗೆ ಆಯ್ದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ ಕಾರ್ಯಕ್ರಮವೂ ನಡೆಯಲಿದೆ.

ಸಂಜೆ 6.30ಕ್ಕೆ ಧಾರ್ಮಿಕ ಸಭೆ ನಡೆಯಲಿದ್ದು, ಸಭೆಯಲ್ಲಿ ವಿವಿಧ ಗಣ್ಯರು, ವಿಶೇಷ ಅತಿಥಿಗಳು ಹಾಗೂ ಧಾರ್ಮಿಕ ಮುಖಂಡರು ಭಾಗವಹಿಸಲಿದ್ದಾರೆಇದರ ಜೊತೆಗೆ ವಿದ್ಯಾರ್ಥಿಗಳಿಗಾಗಿ ವಿವಿಧ ಕಾರ್ಯಕ್ರಮಗಳು ಹಾಗೂ ಭಜನಾ ಕಾರ್ಯಕ್ರಮವನ್ನೂ ಆಯೋಜಿಸಲಾಗಿದೆ.ಇನ್ನು ರಾತ್ರಿ 9 ಗಂಟೆಗೆ ಶ್ರೀ ಕಾಳಿಕಾ ಪರಮೇಶ್ವರಿ ದೇವಸ್ಥಾನದಿಂದ ಹೊಸಂಗಡಿ ವರೆಗೆ ಬೀದಿ ಮೊಸರು ಕುಡಿಕೆ ಉತ್ಸವ ನಡೆಯಲಿದೆ.

15ನೇ ವರ್ಷದ ಮೊಸರು ಕುಡಿಕೆ ಉತ್ಸವದ ಅಂಗವಾಗಿ ನಡೆಯುವ ಎಲ್ಲಾ ಕಾರ್ಯಕ್ರಮಗಳಲ್ಲಿ ಭಕ್ತರು, ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.


Finally found a platform that feels fair and transparent. The graphics are top notch and the winning streaks are real. Happy with jilibetdonnalynlogin.