ಕುಂಬಳೆ ರೈಲ್ವೆ ನಿಲ್ದಾಣದ ಬಳಿ ಚರಂಡಿಗೆ ಬಿದ್ದು ಯುವಕನಿಗೆ ಗಂಭೀರ ಗಾಯ

ಮಂಜೇಶ್ವರ : ಕುಂಬಳೆ ರೈಲ್ವೆ ನಿಲ್ದಾಣದ ಬಳಿ ಸ್ಲ್ಯಾಬ್ ತೆಗೆದುಹಾಕಲಾಗಿದ್ದ ಚರಂಡಿಗೆ ಬಿದ್ದು ಗಲ್ಫ್‌ಗೆ ಮರಳಬೇಕಿದ್ದ ಶಿರಿಯಾ ಮೂಲದ ಯುವಕನೊಬ್ಬ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾನೆ.

​ಅಪಘಾತದಲ್ಲಿ ಯುವಕನ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಪ್ರಥಮ ಚಿಕಿತ್ಸೆಗಾಗಿ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ.

​ಈ ಮಧ್ಯೆ, ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಗಳಲ್ಲಿನ ಚರಂಡಿಗಳ ಸ್ಲ್ಯಾಬ್‌ಗಳನ್ನು ತೆರೆದಿಟ್ಟಿರುವುದು ತೀವ್ರ ಅಪಘಾತಕ್ಕೆ ಆಹ್ವಾನ ನೀಡುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೊತೆಗೆ ಪಾದಚಾರಿ ಮಾರ್ಗವಾದ ಫುಟ್‌ಪಾತ್ ನಲ್ಲಿ ವಿದ್ಯುತ್ ಕಂಬಗಳನ್ನು ಅಳವಡಿಸಿರುವುದು ಪ್ರಯಾಣಿಕರ ಸುರಕ್ಷತೆಗೆ ದೊಡ್ಡ ಬೆದರಿಕೆಯಾಗಿದೆ ಎಂದು ಸಾರ್ವಜನಿಕರು ದೂರಿಕೊಂಡಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!