ಹಲವು ಕ್ರಿಮಿನಲ್ ಪ್ರಕರಣಗಳ ಆರೋಪಿ ‘ಕಾಪಾ’ ಕಾಯಿದೆಯಡಿ ಬಂಧನ

ಮಂಜೇಶ್ವರ : ​ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಪೈವಳಿಕೆ ಮೂಲದ ಅಬೂಬಕ್ಕರ್ ಸಿದ್ದೀಕ್ ಎಂಬಾತನನ್ನು ಮಂಜೇಶ್ವರ ಪೊಲೀಸರು ಕಾಪಾ ಕಾಯಿದೆಯಡಿ ಬಂಧಿಸಿದ್ದಾರೆ.

​ಸ್ಥಳೀಯವಾಗಿ ನಿರಂತರವಾಗಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುತ್ತಿದ್ದ ಹಾಗೂ ಹಲವು ಹಿಂಸಾತ್ಮಕ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಹಿನ್ನೆಲೆಯಲ್ಲಿ ಈತನ ವಿರುದ್ಧ ಮುನ್ನೆಚ್ಚರಿಕೆ ಬಂಧನ ಸೇರಿದಂತೆ ಕಠಿಣ ಕ್ರಮ ಕೈಗೊಳ್ಳಲಾಗಿದೆ.

​ಬಂಧನದ ಪ್ರಕ್ರಿಯೆ ಪೂರ್ಣಗೊಳಿಸಿದ ನಂತರ ಆರೋಪಿಯನ್ನು ಕಣ್ಣೂರು ಕೇಂದ್ರ ಕಾರಾಗೃಹಕ್ಕೆ ರವಾನಿಸಲಾಗಿದೆ.

ಕ್ಷೇತ್ರದಲ್ಲಿ ಅಪರಾಧ ಚಟುವಟಿಕೆಗಳನ್ನು ತಡೆಯುವ ಭಾಗವಾಗಿ ಪೊಲೀಸರು ಈ ಕಠಿಣ ಕ್ರಮವನ್ನು ಜರುಗಿಸಿದ್ದಾರೆ.

SHARE
Loading spinner

One thought on “ಹಲವು ಕ್ರಿಮಿನಲ್ ಪ್ರಕರಣಗಳ ಆರೋಪಿ ‘ಕಾಪಾ’ ಕಾಯಿದೆಯಡಿ ಬಂಧನ

Leave a Reply

Your email address will not be published. Required fields are marked *

error: Content is protected !!