ಮಂಜೇಶ್ವರಾದ್ಯಂತ ವೈಭವದ ಗಣೇಶೋತ್ಸವ: ಹೊಸಂಗಡಿಯಲ್ಲಿ 46ನೇ ವರ್ಷದ ಸಾರ್ವಜನಿಕ ಗಣೇಶೋತ್ಸವಕ್ಕೆ ಚಾಲನೆ

​ಮಂಜೇಶ್ವರ: ಮಂಜೇಶ್ವರ ತಾಲೂಕಿನಾದ್ಯಂತ ಗಣೇಶ ಚತುರ್ಥಿ ಹಬ್ಬವನ್ನು ಭಕ್ತಿ, ಶ್ರದ್ಧೆ ಮತ್ತು ಭಾರೀ ಸಂಭ್ರಮ-ಸಡಗರಗಳೊಂದಿಗೆ ಆಚರಿಸಲಾಗುತ್ತಿದೆ.

​ಹೊಸಂಗಡಿ ಶ್ರೀ ಅಯ್ಯಪ್ಪ ಕ್ಷೇತ್ರದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಆಯೋಜಿಸಲಾದ 46ನೇ ವರ್ಷದ ಗಣೇಶೋತ್ಸವಕ್ಕೆ ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ನಡಿಬೈಲು ಶ್ರೀ ಶಂಕರನಾರಾಯಣ ಭಟ್ ಅವರ ನೇತೃತ್ವದಲ್ಲಿ ಚಾಲನೆ ನೀಡಲಾಯಿತು.

ಗಣೇಶ ಚತುರ್ಥಿಯ ಶುಭ ದಿನದಂದು ವಿವಿಧ ಧಾರ್ಮಿಕ ವೈದಿಕ ವಿಧಿವಿಧಾನಗಳು, ವಿಶೇಷ ಪೂಜೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಉತ್ಸವವು ವಿಜೃಂಭಣೆಯಿಂದ ಆರಂಭಗೊಂಡಿದೆ.

​ಇನ್ನು ಮಂಜೇಶ್ವರದ ಕೆದಂಬಾಡಿ ಸೇರಿದಂತೆ ತಾಲೂಕಿನ ವಿವಿಧೆಡೆ ಗಣೇಶೋತ್ಸವ ಮಂಟಪಗಳಲ್ಲಿ ಗಣಪತಿ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಗಿದ್ದು, ಭಕ್ತಾದಿಗಳು ಸಾಲುಸಾಲಾಗಿ ಬಂದು ಪೂಜೆ ಸಲ್ಲಿಸಿ ಕೃಪೆಗೆ ಪಾತ್ರರಾಗುತ್ತಿದ್ದಾರೆ.

ನಾಡಿನಾದ್ಯಂತ ಹಬ್ಬದ ಕಳೆ ಕಟ್ಟಿದ್ದು, ಎಲ್ಲೆಡೆ ಭಕ್ತಿಪೂರ್ವಕ ವಾತಾವರಣ ಮನೆಮಾಡಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!