ಮಂಜೇಶ್ವರ : ಉಪ್ಪಳ-ಕನ್ಯಾನ ರಸ್ತೆಯ ಬೇಕೂರು ಗ್ರಾಮ ಪರಿಸರದಲ್ಲಿ ಲೋಕೋಪಯೋಗಿ ಇಲಾಖೆಗೆ ಸೇರಿದ ಜಾಗದಲ್ಲಿ ನಡೆಸಲಾಗುತ್ತಿರುವ ಅನಧಿಕೃತ ನಿರ್ಮಾಣಗಳನ್ನು ತಕ್ಷಣವೇ ತೆರವುಗೊಳಿಸುವಂತೆ ಕೇರಳ ಹೈಕೋರ್ಟ್ ಆದೇಶಿಸಿದೆ.

ಲೋಕೋಪಯೋಗಿ ಇಲಾಖೆಯ ಜಾಗದಲ್ಲಿ ನಡೆಯುತ್ತಿರುವ ಅಕ್ರಮ ಒತ್ತುವರಿ ಮತ್ತು ನಿರ್ಮಾಣದ ವಿರುದ್ಧ ಮುಸ್ಲಿಂ ಯೂತ್ ಲೀಗ್ ಮಂಜೇಶ್ವರ ಮಂಡಲ ಪ್ರಧಾನ ಕಾರ್ಯದರ್ಶಿ ಮಜೀದ್ ಪಚ್ಚಂಬಳ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (WP (PIL) No. 185/2026) ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೌಮನ್ ಸೇನ್ ಮತ್ತು ನ್ಯಾಯಮೂರ್ತಿ ಶ್ಯಾಮ್ ಕುಮಾರ್ ವಿ.ಎಂ. ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ಆದೇಶ ನೀಡಿದೆ.


