ತಲಪಾಡಿ ನಾರ್ಲ ಪಡೀಲ್‌ನಲ್ಲಿ ಯುವಕ ಆತ್ಮಹತ್ಯೆಗೆ ಶರಣು

ಮಂಜೇಶ್ವರ: ತಲಪಾಡಿ ನಾರ್ಲ ಪಡೀಲ್‌ನ ಶ್ರೀಮತಿ ಹರಿಣಾಕ್ಷಿ ಅವರ ಪುತ್ರ ರಂಜನ್ (38) ಎಂಬವರು ಸೋಮವಾರ ರಾತ್ರಿ 8 ಗಂಟೆಯ ಸುಮಾರಿಗೆ ಸ್ವಗೃಹದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

​ಘಟನೆಯ ಸಮಯದಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲ ಎನ್ನಲಾಗಿದೆ. ವಿಷಯ ತಿಳಿದ ಕೂಡಲೇ ಸಂಬಂಧಿಕರು ಅವರನ್ನು ಆಸ್ಪತ್ರೆಗೆ ಕರೆದೊಯ್ದರಾದರೂ, ಅದಾಗಲೇ ಅವರು ಕೊನೆಯುಸಿರೆಳೆದಿದ್ದರು.

ಬಳಿಕ ಮೃತದೇಹವನ್ನು ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಯಿತು.

​ಇಂದು ಮರಣೋತ್ತರ ಪರೀಕ್ಷೆಯ ನಂತರ ಮಾಡ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!