ಬಡಾಜೆಯಲ್ಲಿ ಮಹಾಲಿಂಗೇಶ್ವರ ದೇವರ ಬಾಲಾಲಯ ಪ್ರತಿಷ್ಠೆಗೆ ಸಿದ್ಧತೆ

ಮಂಜೇಶ್ವರ : ಬಡಾಜೆಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅನುಜ್ಞಾ ಕಲಶ, ಬಾಲಾಲಯ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಸಮಿತಿ ರೂಪೀಕರಣ ಸಭೆ ಸೆಪ್ಟೆಂಬರ್ 24ರಂದು ನಡೆಯಲಿದೆ.

ಇಂದು ಸಂಜೆ 5.45ಕ್ಕೆ ತಂತ್ರಿಯವರ ಆಗಮನದೊಂದಿಗೆ ಕಾರ್ಯಕ್ರಮಗಳು ಆರಂಭವಾಗಲಿದ್ದು, ಸಂಜೆ 6 ಗಂಟೆಗೆ ಪ್ರಾರ್ಥನೆ, ಬಾಲಾಲಯದಲ್ಲಿ ರಾಕ್ಷೋಘ್ನ, ವಾಸ್ತು ಹವನ ಹಾಗೂ ರಾತ್ರಿ ಮಹಾಪೂಜೆ ನಡೆಯಲಿದೆ.

ಸೆಪ್ಟೆಂಬರ್ 24ರ ಗುರುವಾರ ಬೆಳಗ್ಗೆ 9 ಗಂಟೆಗೆ ಗಣಪತಿ ಹೋಮ, ಮಹಾಪೂಜೆ ಹಾಗೂ ಸಂಕೋಚ ವಿಧಿ ಪ್ರಾರಂಭ , ನಡೆಯಲಿವೆ. ಬಳಿಕ ಬಾಲಾಲಯದಲ್ಲಿ ಶ್ರೀ ದೇವರ ಪ್ರತಿಷ್ಠೆ, ಕಲಶಾಭಿಷೇಕ, ಗೋಪುರ ಶಿಥಿಲೀಕರಣ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ಬೆಳಗ್ಗೆ 11 ಗಂಟೆಗೆ ಮಹಾಪೂಜೆ ಹಾಗೂ ಪ್ರಸಾದ ವಿತರಣೆ ನಡೆಯಲಿದೆ.

ಮಧ್ಯಾಹ್ನ 12 ಗಂಟೆಗೆ ಬ್ರಹ್ಮಕಲಶೋತ್ಸವದ ಸಮಿತಿ ರೂಪೀಕರಣ ಸಭೆ ನಡೆಯಲಿದ್ದು, ಮಧ್ಯಾಹ್ನ 1.30ಕ್ಕೆ ಅನ್ನಸಂತರ್ಪಣೆ ಆಯೋಜಿಸಲಾಗಿದೆ.

ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವರ ಗಂಧಪ್ರಸಾದ ಸ್ವೀಕರಿಸುವಂತೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಆಯೋಜಕರು ಮನವಿ ಮಾಡಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!