ಮೀಯಪದವು ವಿದ್ಯಾವರ್ಧಕ ಪ್ರೌಢ ಪ್ರಾಥಮಿಕ ಶಾಲೆಯಲ್ಲಿ ದಿI .ಯಂ.ರಾಮಕೃಷ್ಣ ರಾವ್ ಅವರ 21ನೇ ಪುಣ್ಯತಿಥಿ ಸಂಸ್ಮರಣೆ

ಮೀಯಪದವು: ಮೀಯಪದವು ವಿದ್ಯಾವರ್ಧಕ ಪ್ರೌಢ ಪ್ರಾಥಮಿಕ ಶಾಲೆಯ ಸಂಚಾಲಕರಾಗಿ , ಅಧ್ಯಾಪಕರಾಗಿ ಹಾಗೂ ಮೀಯಪದವು ಪ್ರದೇಶದ ವಿದ್ಯಾಭ್ಯಾಸ ಕ್ಷೇತ್ರದ ಧ್ರುವತಾರೆನೆಸಿಕೊಂಡಿರುವ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತಮ್ಮದೇ ಆದ ಕೊಡುಗೆ ನೀಡಿದ ದಿI . ಯಂ . ರಾಮಕೃಷ್ಣ ರಾವ್ ಅವರ 21ನೇ ಪುಣ್ಯತಿಥಿ ಸಂಸ್ಮರಣೆ ಹಾಗೂ ಸನ್ಮಾನ ಕಾರ್ಯಕ್ರಮ ಸೆಪ್ಟೆಂಬರ್ 26ರಂದು ನಡೆಯಲಿದೆ.

ಶನಿವಾರ ಬೆಳಗ್ಗೆ 10 ಗಂಟೆಗೆ ಮೀಯಪದವು ವಿದ್ಯಾವರ್ಧಕ ಪ್ರೌಢಶಾಲೆಯ ರಂಗ ಮಂಟಪದಲ್ಲಿ ಕಾರ್ಯಕ್ರಮ ನಡೆಯಲಿದೆ.

ಶಾಲೆಯ ಆಡಳಿತ ಮಂಡಳಿ, ಶಿಕ್ಷಕರು, ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು ಹಾಗೂ ಶಿಕ್ಷಣಾಭಿಮಾನಿಗಳ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ಶ್ರೀ ನಾರಾಯಣ ದೇಲಂಪಾಡಿ ವಹಿಸಲಿದ್ದಾರೆ.

ಶಾಲಾ ಆಡಳಿತ ಸಲಹೆಗಾರ ಶ್ರೀ ಶ್ರೀಧರ ರಾವ್ ಆರ್. ಎಂ. ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಭಾಷಣವನ್ನಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಶ್ರೀ ಪ್ರೊ . ಡಾ . ರಾಧಾಕೃಷ್ಣ ಎಸ್ .ಐತಾಳ್ ಹಾಗೂ ಶ್ರೀ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆಕೋಡಿ ಭಾಗವಹಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ಶಾಲಾ ಹಳೆ ವಿದ್ಯಾರ್ಥಿಯಾದ ಶ್ರೀ ಎಂ. ಜಿ. ಬಾಲಸುಬ್ರಹ್ಮಣ್ಯ ಮತ್ತು ಶಿಕ್ಷಕರಾದ ಶ್ರೀ ಜಗದೀಶ್ ಶೆಟ್ಟಿ ಲಿಯಾ ಅವರನ್ನು ಸನ್ಮಾನಿಸಲಾಗುವುದು.

ಮಧ್ಯಾಹ್ನ 2 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ‘ಗಾನ ಲಹರಿ’ ನಡೆಯಲಿದೆ. ಶಾಲಾ ಅಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಹಳೆ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಶ್ರೀಮತಿ ರಾಜೇಶ್ವರಿ ಎಸ್. ರಾವ್, ಶಾಲಾ ಸಂಚಾಲಕಿ ಹಾಗೂ ಶ್ರೀ ಡಿ. ಎಸ್. ಅರವಿಂದಾಕ್ಷ ಭಂಡಾರಿ, ಪ್ರಧಾನ ಅಧ್ಯಾಪಕರು ಉಪಸ್ಥಿತರಿರುವರು.

ರಕ್ಷಕ-ಶಿಕ್ಷಕ ಸಂಘ, ಅಧ್ಯಾಪಕ ವೃಂದ, ವಿದ್ಯಾರ್ಥಿ ಸಂಘ, ಹಳೆ ವಿದ್ಯಾರ್ಥಿ ಸಂಘ, ಶಾಲಾ ವಿದ್ಯಾರ್ಥಿಗಳು ಹಾಗೂ ಹಿತೈಷಿಗಳ ಸಹಕಾರದಲ್ಲಿ ಕಾರ್ಯಕ್ರಮ ನಡೆಯಲಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!