ಹೊಸಂಗಡಿ: ಕೇಂದ್ರ ಸರ್ಕಾರದ ಒತ್ತಾಸೆಯಿಂದ ಕೇರಳದ ಯುಡಿಎಫ್ ಸರ್ಕಾರವು ಕೇಂದ್ರ ತನಿಖಾ ಸಂಸ್ಥೆಯ ಪತ್ರದ ನೆಪದಲ್ಲಿ ಪಕ್ಷದ ಹಿರಿಯ ನಾಯಕ ಹಾಗೂ ಕೇರಳದ ವಿರೋಧ ಪಕ್ಷದ ನಾಯಕ ಪಿಣರಾಯಿ ವಿಜಯನ್ ಅವರನ್ನು ಬೇಟೆಯಾಡಲು ಮುಂದಾಗಿದೆ ಎಂದು ಆರೋಪಿಸಿ, ಸಿಪಿಐಎಂ ಮಂಜೇಶ್ವರ ಏರಿಯಾ ಸಮಿತಿಯ ನೇತೃತ್ವದಲ್ಲಿ ಹೊಸಂಗಡಿಯಲ್ಲಿ ಪ್ರತಿಭಟನಾ ಮೆರವಣಿಗೆ ಹಾಗೂ ಸಾರ್ವಜನಿಕ ಸಭೆ ನಡೆಯಿತು.

ಪ್ರತಿಭಟನಾ ಸಭೆಯನ್ನು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಕೆ.ಆರ್. ಜಯಾನಂದ ಉದ್ಘಾಟಿಸಿದರು. ಕೆ. ಕಮಲಾಕ್ಷ ಅಧ್ಯಕ್ಷತೆ ವಹಿಸಿದ್ದರು. ಅಬ್ದುಲ್ ರಸಾಕ್ ಚಿಪ್ಪಾರ್ ಸ್ವಾಗತಿಸಿದರು.
ಕೇಂದ್ರ ಹಾಗೂ ಕೇರಳ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನಾಕಾರರು ಮೆರವಣಿಗೆಯಲ್ಲಿ ಭಾಗವಹಿಸಿದರು.


