ಮಂಜೇಶ್ವರ ಗೋವಿಂದ ಪೈ -ನೆತ್ತಿಲಪದವು ರಸ್ತೆ ಅಗಲೀಕರಣ: ಯು ಡಿ ಎಫ್ ಸರ್ಕಾರದಿಂದ ರೂ.1.5 ಕೋಟಿ ಅನುದಾನ ಮಂಜೂರು; ರೂಪುರೇಖೆ ತಯಾರಿಗೆ ಚಾಲನೆ

​ಮಂಜೇಶ್ವರ: ಸ್ಥಳೀಯ ಬಹುದಿನಗಳ ಬೇಡಿಕೆಯಾಗಿದ್ದ ಮಂಜೇಶ್ವರ ಗೋವಿಂದ ಪೈ ಕಾಲೇಜಿನಿಂದ ನೆತ್ತಿಲಪದವುವರೆಗಿನ ರಸ್ತೆಯ ಅಗಲೀಕರಣ ಕಾಮಗಾರಿಗೆ ಯು.ಡಿ.ಎಫ್. ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮಂಡಿಸಿದ ಮೊದಲ ಬಜೆಟ್‌ನಲ್ಲಿ ರೂ.1.5 ಕೋಟಿ ಅನುದಾನ ಮಂಜೂರು ಮಾಡಿದೆ.

​ಮಂಜೇಶ್ವರ ಕ್ಷೇತ್ರದ ಶಾಸಕ ಎ.ಕೆ.ಎಂ. ಅಶ್ರಫ್ ಅವರ ವಿಶೇಷ ಮುತುವರ್ಜಿ ಹಾಗೂ ನಿರಂತರ ಶ್ರಮದಿಂದಾಗಿ ಈ ಮೊತ್ತ ಮಂಜೂರಾಗಿದ್ದು, ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆಯ ನೇತೃತ್ವದಲ್ಲಿ ಕೈಗೆತ್ತಿಕೊಳ್ಳಲಾಗುವುದು.

​ಅನುದಾನ ಮಂಜೂರಾದ ಹಿನ್ನೆಲೆಯಲ್ಲಿ ಗುರುವಾರದಂದು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಕಾಮಗಾರಿಯ ಪ್ರಾಥಮಿಕ ಎಸ್ಟಿಮೇಟ್ ತಯಾರಿಸುವ ಪ್ರಕ್ರಿಯೆಯನ್ನು ಸ್ಥಳದಲ್ಲೇ ನಡೆಸಿದರು.

​ಈ ಸಂದರ್ಭದಲ್ಲಿ ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯ ಹರ್ಷಾದ್ ವರ್ಕಾಡಿ, ಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷ ಬಶೀರ್ ಸೇರಿದಂತೆ ಪ್ರಮುಖ ಜನಪ್ರತಿನಿಧಿಗಳು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದು ಕಾಮಗಾರಿಯ ರೂಪುರೇಷೆ ಕುರಿತು ಪರಿಶೀಲನೆ ನಡೆಸಿದರು.

​ರಸ್ತೆ ಅಗಲೀಕರಣದಿಂದಾಗಿ ಗೋವಿಂದ ಪೈ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸುತ್ತಮುತ್ತಲಿನ ಸಾರ್ವಜನಿಕರ ಸುಗಮ ಸಂಚಾರಕ್ಕೆ ಇದ್ದ ದೊಡ್ಡ ತೊಡಕು ನಿವಾರಣೆಯಾಗಲಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!