ಮಂಜೇಶ್ವರದಲ್ಲಿ 14 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: 19ರ ಯುವಕನ ಬಂಧನ

​ಮಂಜೇಶ್ವರ : ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹದಿನಾಲ್ಕು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಕೇಳಿಬಂದಿದೆ.

ಈ ಕೃತ್ಯ ಎಸಗಿದ ಶಂಕೆಯ ಮೇರೆಗೆ ಬಾಲಕಿಯ ಹತ್ತಿರದ ಸಂಬಂಧಿಯೂ ಆಗಿರುವ ಹತ್ತೊಂಬತ್ತು ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

​ಬಾಲಕಿಯ ದೂರಿನ ಆಧಾರದ ಮೇಲೆ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ತನಿಖೆ ಮುಂದುವರಿದಿರುವ ಕಾರಣ ಬಂಧಿತ ಯುವಕನ ಕುರಿತು ಹೆಚ್ಚಿನ ವಿವರಗಳನ್ನು ಪೊಲೀಸರು ಸದ್ಯಕ್ಕೆ ಗೌಪ್ಯವಾಗಿಟ್ಟಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!