ಮಂಜೇಶ್ವರ: ಓವರ್‌ಟೇಕ್ ಭರದಲ್ಲಿ ಕಾರು-ಬೈಕ್ ಭೀಕರ ಅಪಘಾತ; ಸ್ಥಳದಲ್ಲೇ ಬೈಕ್ ಸವಾರ ಸಾವು

​ಮಂಜೇಶ್ವರ: ಕಾರೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಸೋಮವಾರ ಸಂಜೆ 5:30ರ ಸುಮಾರಿಗೆ ವರ್ಕಾಡಿಯಲ್ಲಿ ಸಂಭವಿಸಿದೆ.

​ಅಪಘಾತದಲ್ಲಿ ಕೊಡ್ಲ ಮೊಗರು ನಿವಾಸಿ ಉಮ್ಮರ್ ಎಂಬವರ ಪುತ್ರ ಮೊಹಮ್ಮದ್ ಟಿ. ಪ್ರಾಣ ಕಳೆದುಕೊಂಡಿದ್ದಾರೆ.

ಕಾರು ಚಾಲಕನು ಅತಿವೇಗದಲ್ಲಿ ಓವರ್‌ಟೇಕ್ ಮಾಡಲು ಪ್ರಯತ್ನಿಸಿದ ಭರದಲ್ಲಿ ಎದುರಿಗೆ ಬಂದ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾನೆ ಎಂದು ತಿಳಿದುಬಂದಿದೆ. ಡಿಕ್ಕಿಯ ರಭಸಕ್ಕೆ ಗಂಭೀರ ಗಾಯಗೊಂಡ ಮೊಹಮ್ಮದ್ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಷ್ಟರಲ್ಲಿ ಅವರ ಜೀವ ರಕ್ಷಿಸಲು ಸಾಧ್ಯವಾಗಲಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

​ಈ ಕುರಿತು ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ಕಾರಣವಾದ ಕಾರು ಹಾಗೂ ಅದರ ಚಾಲಕನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ತನಿಖೆ ಮುಂದುವರೆಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!