
ಮಂಜೇಶ್ವರ: ಕನಿಲ ಶ್ರೀ ಭಗವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪುಟಾಣಿ ಮಕ್ಕಳಿಗಾಗಿ ‘ಯೆಲ್ಲೋ ಡೇ’ ಸಾಂಸ್ಕೃತಿಕ ಕಾರ್ಯಕ್ರಮವನ್ನು ಸಂಭ್ರಮದಿಂದ ಆಯೋಜಿಸಲಾಯಿತು.

ಹಳದಿ ಬಣ್ಣದ ಮಹತ್ವವನ್ನು ಪರಿಚಯಿಸುವ ಉದ್ದೇಶದಿಂದ ನಡೆದ ಕಾರ್ಯಕ್ರಮದಲ್ಲಿ ಪುಟಾಣಿ ಮಕ್ಕಳು ಉತ್ಸಾಹದಿಂದ ಪಾಲ್ಗೊಂಡರು. ವಿವಿಧ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಮಕ್ಕಳು ಸಂಭ್ರಮಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಅಧ್ಯಕ್ಷ ಗಣೇಶ್ ಪಾವೂರು, ಉಪಾಧ್ಯಕ್ಷ ಗಂಗಾಧರ ದುರ್ಗಿಪಳ್ಳ, ಪ್ರಧಾನ ಕಾರ್ಯದರ್ಶಿ ಪದ್ಮನಾಭ ಕಡಪ್ಪರ, ಶಾಲಾ ಸಂಚಾಲಕ ದಯಾನಂದ ಪಾವೂರು, ಪ್ರಾಂಶುಪಾಲೆ ಮಂಜುಳಾ, ಶಿಕ್ಷಕಿಯರು ಹಾಗೂ ಪುಟಾಣಿ ಮಕ್ಕಳು ಉಪಸ್ಥಿತರಿದ್ದರು.




