ಮಂಜೇಶ್ವರ: ಕನಿಲ ಶ್ರೀ ಭಗವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಒಂದರಿಂದ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗಾಗಿ ವಿಜ್ಞಾನ ಮೇಳ ಕಾರ್ಯಕ್ರಮ ನಡೆಯಿತು. ಮೇಳದಲ್ಲಿ ವಿದ್ಯಾರ್ಥಿಗಳು ವಿವಿಧ ವಿಜ್ಞಾನ ಮಾದರಿಗಳು ಹಾಗೂ ಕಲಾತ್ಮಕ ವಸ್ತುಗಳನ್ನು ಪ್ರದರ್ಶಿಸಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು.



ಕಾರ್ಯಕ್ರಮವನ್ನು ಶಾಲಾ ಅಧ್ಯಕ್ಷ ಗಣೇಶ್ ಪಾವೂರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಲಾ ಉಪಾಧ್ಯಕ್ಷ ಗಂಗಾಧರ ದುರ್ಗಿಪಳ್ಳ, ಪ್ರಧಾನ ಕಾರ್ಯದರ್ಶಿ ಪದ್ಮನಾಭ ಕಡಪರ, ಸಂಚಾಲಕ ದಯಾನಂದ ಪಾವೂರು, ಪ್ರಾಂಶುಪಾಲೆ ಮಂಜುಳಾ, ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

