
ಮಂಜೇಶ್ವರ: ಮಂಜೇಶ್ವರದ ಕನಿಲ ಶ್ರೀ ಭಗವತಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ 5ನೇ ತರಗತಿಯಿಂದ 10ನೇ ತರಗತಿ ವರೆಗಿನ ವಿದ್ಯಾರ್ಥಿಗಳ ಕ್ರೀಡಾಕೂಟವು ಶಾಲಾ ಮೈದಾನದಲ್ಲಿ ನಡೆಯಿತು.



ಕಾರ್ಯಕ್ರಮವನ್ನು ಮಂಜೇಶ್ವರ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಅರ್ಜುನ್ ಅರವಿಂದ್ ಉದ್ಘಾಟಿಸಿದರು. ಶಾಲಾ ಅಧ್ಯಕ್ಷ ಗಣೇಶ್ ಪಾವೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.




ಕಾರ್ಯಕ್ರಮದಲ್ಲಿ ಶಾಲೆಯ ಉಪಾಧ್ಯಕ್ಷ ಗಂಗಾಧರ ದುರ್ಗಿಪಳ್ಳ, ಪ್ರಧಾನ ಕಾರ್ಯದರ್ಶಿ ಪದ್ಮನಾಭ ಕಡಪರ, ಪಿಟಿಎ ಅಧ್ಯಕ್ಷೆ ಜಯಲಕ್ಷ್ಮಿ, ಶಾಲಾ ಸಂಚಾಲಕ ದಯಾನಂದ ಪಾವೂರು, ಪ್ರಾಂಶುಪಾಲೆ ಮಂಜುಳಾ ಪಿ.ವಿ. ಹಾಗೂ ಉಪಪ್ರಾಂಶುಪಾಲೆ ಮಾಲತಿ ಉಪಸ್ಥಿತರಿದ್ದರು.









ಶಾಲೆಯ ಶಿಕ್ಷಕರು, ಶಿಕ್ಷಕಿಯರು, ಪೋಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕ್ರೀಡಾಕೂಟದ ಅಂಗವಾಗಿ ವಿದ್ಯಾರ್ಥಿಗಳು ಮತ್ತು ಪೋಷಕರಿಗಾಗಿ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಕ್ರೀಡಾ ಚಟುವಟಿಕೆಗಳಲ್ಲಿ ಎಲ್ಲರೂ ಉತ್ಸಾಹದಿಂದ ಪಾಲ್ಗೊಂಡರು.

