ಕೊಡ್ಲ ಮೊಗರು ಶ್ರೀ ವಾಣಿ ವಿಜಯ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಡಿಜಿಟಲ್ ಸ್ಕ್ವೇರ್ ಉದ್ಘಾಟನೆ

ಕೊಡ್ಲ ಮೊಗರು: ವಿದ್ಯಾರ್ಥಿಗಳಲ್ಲಿ ಡಿಜಿಟಲ್ ಕಲಿಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಕೊಡ್ಲ ಮೊಗರು ಶ್ರೀ ವಾಣಿ ವಿಜಯ ಹೈಯರ್ ಸೆಕೆಂಡರಿ ಶಾಲೆಯಲ್ಲಿ ‘ಲರ್ನಿಂಗ್ ಟುಡೇ, ಲೀಡಿಂಗ್ ಟುಮಾರೋ’ (Learning Today, Leading Tomorrow) ಎಂಬ ಆಶಯದೊಂದಿಗೆ ರೂಪಿಸಲಾದ ಡಿಜಿಟಲ್ ಸ್ಕ್ವೇರ್ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ವರ್ಕಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉಮ್ಮರ್ ಬೋರ್ಕಳ ಅವರು ಡಿಜಿಟಲ್ ಸ್ಕ್ವೇರ್ ಅನ್ನು ಉದ್ಘಾಟಿಸಿದರು. ಪಂಚಾಯತ್ ಸದಸ್ಯರಾದ ಗೋಪಾಲಕೃಷ್ಣ ಪಜ್ವ ಅವರು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಮೋಹನ ಬಿ. ವಹಿಸಿದ್ದರು. ಶಾಲೆಯ ಮುಖ್ಯ ಶಿಕ್ಷಕಿ ಕೃಷ್ಣವೇಣಿ ಬಿ. ಪ್ರಾಸ್ತಾವಿಕವಾಗಿ ಮಾತನಾಡಿ, ಡಿಜಿಟಲ್ ಕಲಿಕೆಯ ಮಹತ್ವ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯಲ್ಲಿ ತಂತ್ರಜ್ಞಾನದ ಪಾತ್ರವನ್ನು ವಿವರಿಸಿದರು.

ಶಶಿಕಲಾ ಶಿಕ್ಷಕಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕರಾದ ಆರತಿ ಹಾಗೂ ಬಾಲಚಂದ್ರ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳ ಕಲಿಕಾ ಅನುಭವವನ್ನು ಆಧುನಿಕಗೊಳಿಸುವ ನಿಟ್ಟಿನಲ್ಲಿ ಶಾಲೆಯ ಈ ಪ್ರಯತ್ನಕ್ಕೆ ಮೆಚ್ಚುಗೆ ವ್ಯಕ್ತವಾಯಿತು.

SHARE
Loading spinner

Leave a Reply

Your email address will not be published. Required fields are marked *

error: Content is protected !!