
ಮಂಜೇಶ್ವರ: ಹೊಸಂಗಡಿಯ ಅಂಗಡಿಪದವು ನಿವಾಸಿ ಹಾಗೂ ಟೆಂಪೋ ಚಾಲಕ ಮಧ್ವೇಂದ್ರನಾಥ್ (48) ಅವರು ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಇವರು ಶಾಸ್ತಾ ಬೇಕರಿ ಮಾಲೀಕ ಸುಂದರ ಮತ್ತು ದಿ. ಸತ್ಯವತಿ ದಂಪತಿಯ ಪುತ್ರರಾಗಿದ್ದಾರೆ.

ಗುರುವಾರ ರಾತ್ರಿ ಊಟ ಮುಗಿಸಿ ಮಲಗಲು ತೆರಳಿದ್ದ ಅವರು ಕೋಣೆಯ ಬಾಗಿಲು ಹಾಕಿಕೊಂಡಿದ್ದರು. ಎಷ್ಟೇ ಕರೆದರೂ ಬಾಗಿಲು ತೆರೆಯದ ಕಾರಣ ಅನುಮಾನಗೊಂಡು ಬಾಗಿಲು ಮುರಿದು ನೋಡಿದಾಗ, ಅವರು ನೇಣು ಬಿಗಿದುಕೊಂಡಿರುವುದು ಬೆಳಕಿಗೆ ಬಂದಿದೆ. ತಕ್ಷಣ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ದುರಾದೃಷ್ಟವಶಾತ್ ಅವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಮೃತರು ಪತ್ನಿ ಸಂಧ್ಯಾ, ಮಕ್ಕಳಾದ ರಶ್ಮಿ ಹಾಗೂ ರಿತೇಶ್ ಸೇರಿದಂತೆ ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾರೆ.ಈ ಸಂಬಂಧ ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.


