ಮಂಜೇಶ್ವರ: ವಿಶ್ವ ಹಿಂದೂ ಪರಿಷತ್ ಕಣ್ಣೂರು ವಿಭಾಗದ ವತಿಯಿಂದ ಅಶೋಕ್ ಸಿಂಘಾಲ್ ಅವರ ಜನ್ಮ ಶತಾಬ್ದಿ ಕಾರ್ಯಕ್ರಮ ನವೆಂಬರ್ 15ರಂದು ನಡೆಯಲಿದೆ.

ಭಾನುವಾರ ಮಧ್ಯಾಹ್ನ 3 ಗಂಟೆಗೆ ಹೊಸಂಗಡಿಯಲ್ಲಿರುವ ವಿ.ಎಚ್.ಪಿ. ಜಿಲ್ಲಾ ಕಾರ್ಯಾಲಯ ‘ಪ್ರೇರಣಾ’ದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.



