ವರ್ಕಾಡಿ : ಪೆರ್ಮನಂಜಿ ಮುಡಿಮಾರು ರಸ್ತೆ ಉದ್ಘಾಟನೆ

ಮಂಜೇಶ್ವರ : ಕಾಸರಗೋಡು ಜಿಲ್ಲಾ ಪಂಚಾಯತು ನಿಧಿಯಿಂದ ಕಾಂಕ್ರೀಟೀಕರಣಗೊಂಡ ವರ್ಕಾಡಿ ಗ್ರಾಮ ಪಂಚಾಯತಿನ ಪೆರ್ಮನಂಜಿ – ಮುಡಿಮಾರು ರಸ್ತೆಯನ್ನು ಕಾಸರಗೋಡು ಜಿಲ್ಲಾ ಪಂಚಾಯತು ಅಧ್ಯಕ್ಷ ಸಾಬು ಅಬ್ರಹಾಂ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ವರ್ಕಾಡಿ ಗ್ರಾಮ ಪಂಚಾಯತು ಅಧ್ಯಕ್ಷ ಉಮ್ಮರ್ ಬೋರ್ಕಳ ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ಪಂಚಾಯತ್ ಸದಸ್ಯ ಹರ್ಷಾದ್ ವರ್ಕಾಡಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಮಂಜೇಶ್ವರ ಬ್ಲಾಕ್ ಪಂಚಾಯತು ಉಪಾಧ್ಯಕ್ಷೆ ಶ್ರೀಮತಿ ಕಮಲಾಕ್ಷಿ ಕೆ., ವರ್ಕಾಡಿ ಗ್ರಾಮ ಪಂಚಾಯತು ಸ್ಥಾಯಿ ಸಮಿತಿ ಅಧ್ಯಕ್ಷ ಪುರುಷೋತ್ತಮ ಅರಿಬೈಲು,ವರ್ಕಾಡಿ ಗ್ರಾಮ ಪಂಚಾಯತ್ ಸದಸ್ಯರುಗಳಾದ ಮಾಲತಿ, ತುಳಸಿ ಕುಮಾರಿ, ಲೀನಾ ಟೆಲ್ಲಿಸ್, ಮಾಜಿ ಸದಸ್ಯರಾದ ಮೊಹಮ್ಮದ್ ಮಜಾಲು, ರಜಾಕ್ ಕೆದುಂಬಾಡಿ, ವರ್ಕಾಡಿ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಮೊಹಮ್ಮದ್ ಹನೀಫ್, ವಿನೋದ್ ಕುಮಾರ್ ಪಾವೂರು ಮುಂತಾದವರು ಉಪಸ್ಥಿತರಿದ್ದರು.

ರಸ್ತೆ ಕಾಮಗಾರಿಯ ಗುತ್ತಿಗೆದಾರ ಸಿ.ಎಚ್. ಅಬ್ದುಲ್ ಖಾದರ್ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಆರಿಫ್ ಮಚ್ಚಂಪಾಡಿ ಕಾರ್ಯಕ್ರಮ ನಿರೂಪಿಸಿ ನಾಗೇಶ್ ಬಳ್ಳೂರು ವಂದಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!