ಕಣ್ವತೀರ್ಥ ಶಾಲೆಯಲ್ಲಿ ಅದ್ಧೂರಿ ವಿಜಯೋತ್ಸವ ಮೆರವಣಿಗೆ

ಮಂಜೇಶ್ವರ ಉಪಜಿಲ್ಲಾ ಮಟ್ಟದ ಶಾಲಾ ಕಲೋತ್ಸವ – 2026ರಲ್ಲಿ ಎಲ್.ಪಿ. ವಿಭಾಗದ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಕಣ್ವತೀರ್ಥದ ವತಿಯಿಂದ ನವೆಂಬರ್ 16ರಂದು ಬೆಳಿಗ್ಗೆ 10 ಗಂಟೆಗೆ ಅದ್ಧೂರಿಯಾದ ವಿಜಯೋತ್ಸವ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಯಿತು.

ಶಾಲಾ ಆವರಣದಿಂದ ಕುಂಜತ್ತೂರು ಜಂಕ್ಷನ್‌ವರೆಗೆ ನಡೆದ ಮೆರವಣಿಗೆಯನ್ನು ಮಂಜೇಶ್ವರ ಗ್ರಾಮ ಪಂಚಾಯತ್‌ನ ಕಲ್ಯಾಣ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ಝರೀನಾ ಬಾನು ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಈಶ್ವರ ಮಾಸ್ಟರ್, ಶಾಲಾ ಪಿಟಿಎ ಅಧ್ಯಕ್ಷರಾದ ಅಬೂಬಕ್ಕರ್ ಸಿದ್ದೀಕ್, ಎಸ್ ಎಸ್ ಜಿ ಅಧ್ಯಕ್ಷರಾದ ಶ್ರೀಯುತ ಬಾಲಕೃಷ್ಣ ಶೆಟ್ಟಿ, ಸೇರಿದಂತೆ ಹಲವು ಗಣ್ಯರು, ಶಿಕ್ಷಕರು, ಪೋಷಕರು ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.

ಶಾಲೆಯ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಮೆರವಣಿಗೆಯಲ್ಲಿ ಪಾಲ್ಗೊಂಡು ತಮ್ಮ ಶಾಲೆಯ ಅಭೂತಪೂರ್ವ ಸಾಧನೆಯ ಸಂಭ್ರಮವನ್ನು ಹಂಚಿಕೊಂಡರು. ಶಿಕ್ಷಕರು, ಪೋಷಕರು ಹಾಗೂ ಊರಿನ ಜನರ ಸಹಭಾಗಿತ್ವದಿಂದ ಮೆರವಣಿಗೆಯು ಅತ್ಯಂತ ಆಕರ್ಷಕವಾಗಿ ಮೂಡಿಬಂದಿತು.

ವಿದ್ಯಾರ್ಥಿಗಳ ಪ್ರತಿಭೆ, ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಹಾಗೂ ಪೋಷಕರ ಸಹಕಾರದ ಫಲವಾಗಿ ದೊರೆತ ಈ ಸಮಗ್ರ ಪ್ರಶಸ್ತಿಯು ಶಾಲೆಯ ಹೆಮ್ಮೆಯ ಸಾಧನೆಯಾಗಿದೆ. ಈ ವಿಜಯೋತ್ಸವವು ಮಕ್ಕಳಲ್ಲಿ ಇನ್ನಷ್ಟು ಸಾಧನೆ ಮಾಡುವ ಉತ್ಸಾಹ ಮತ್ತು ಆತ್ಮವಿಶ್ವಾಸವನ್ನು ತುಂಬಿತು.

ಒಟ್ಟಿನಲ್ಲಿ, ಕಣ್ವತೀರ್ಥ ಶಾಲೆಯ ಈ ವಿಜಯೋತ್ಸವ ಮೆರವಣಿಗೆಯು ಎಲ್ಲರ ಸಹಕಾರದೊಂದಿಗೆ ಸಂಭ್ರಮದಿಂದ ಹಾಗೂ ಯಶಸ್ವಿಯಾಗಿ ನೆರವೇರಿತು.

SHARE
Loading spinner

Leave a Reply

Your email address will not be published. Required fields are marked *

error: Content is protected !!