ಬಡಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶಿವ ಪಂಚಾಕ್ಷರಿ ಜಪ; ಜನವರಿ 6ರಿಂದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಸಿದ್ಧತೆ

ಬಡಾಜೆ: ಬಡಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಾನುವಾರದಂದು ಸಾಮೂಹಿಕ ಶಿವ ಪಂಚಾಕ್ಷರಿ ಜಪ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನಡೆಯಿತು.

ಬೆಳಿಗ್ಗೆ 7ರಿಂದ 9 ಗಂಟೆಯವರೆಗೆ ನಡೆದ ಸಾಮೂಹಿಕ ಶಿವ ಪಂಚಾಕ್ಷರಿ ಜಪ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಭಕ್ತಿಶ್ರದ್ಧೆಯಿಂದ ಮಂತ್ರವನ್ನು ಪಠಿಸಿದರು.

ದೇವಸ್ಥಾನದ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವವು ಮುಂಬರುವ ಜನವರಿ 6ರಿಂದ 17ರವರೆಗೆ
ಬ್ರಹ್ಮಶ್ರೀ ಬಡಾಜೆ ಗೋಪಾಲಕೃಷ್ಣ ತಂತ್ರಿಗಳ ದಿವ್ಯ ಹಸ್ತದಿಂದ ವಿವಿಧ ವೈದಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನೆರವೇರಲಿವೆ.

ಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಉತ್ಸವದ ಪೂರ್ವಸಿದ್ಧತಾ ಕಾರ್ಯಗಳು ಭರದಿಂದ ಸಾಗುತ್ತಿವೆ. ದೇವಸ್ಥಾನದ ಪುನರ್ ಪ್ರತಿಷ್ಠೆ ಮತ್ತು ಅಷ್ಟಬಂಧ ಬ್ರಹ್ಮಕಲಶೋತ್ಸವವನ್ನು ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ.
ಇದರ ಪೂರ್ವ ಭಾವಿಯಾಗಿ ಸಾಮೂಹಿಕ ಶಿವ ಪಂಚಾಕ್ಷರಿ ಜಪ ನೆರವೇರಿತು.

SHARE
Loading spinner

Leave a Reply

Your email address will not be published. Required fields are marked *

error: Content is protected !!