ರಾಹುಲ್, ಪ್ರಿಯಾಂಕಾ ಬಂಧನ ಖಂಡಿಸಿ ಮೂಡುಬಿದಿರೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ
ಮೂಡುಬಿದಿರೆ, ಜು. 24: ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಪ್ರಶ್ನಿಸಿ ಪ್ರತಿಭಟನೆ ನಡೆಸಿದ ವೇಳೆ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ತಾಲೂಕು ಆಡಳಿತ ಸೌಧದ ಎದುರು ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಮಾಜಿ ಸಚಿವ ಅಭಯಚಂದ್ರ ಜೈನ್, ನೀಟ್ ಅಕ್ರಮದಿಂದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದ್ದು, ಅದನ್ನು ಪ್ರಶ್ನಿಸಿದವರ ವಿರುದ್ಧ ಕೇಂದ್ರ ಸರ್ಕಾರ ದಮನಕಾರಿ ಕ್ರಮ ಕೈಗೊಳ್ಳುತ್ತಿರುವುದು ಖಂಡನೀಯ ಎಂದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ…
