ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಭಾಗವಹಿಸಲು ಶಾಸಕ ಡಾ. ಭರತ್ ಶೆಟ್ಟಿ ಕರೆ
ಮಂಗಳೂರು, ಜುಲೈ 1: ಚುನಾವಣಾ ಆಯೋಗವು ಹಮ್ಮಿಕೊಂಡಿರುವ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026 ಪ್ರಕ್ರಿಯೆಯಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಬಿಎಲ್‌ಒ ಅಧಿಕಾರಿಗಳು ಶಾಸಕರಿಗೆ ಅರ್ಜಿ ನಮೂನೆಯನ್ನು ಹಸ್ತಾಂತರಿಸಿದರು. ಪ್ರಜಾಪ್ರಭುತ್ವದ ಸುಭದ್ರತೆಗೆ ಮತದಾರರ ಪಟ್ಟಿಯ ಪರಿಷ್ಕರಣೆ ಅತ್ಯಂತ ಮಹತ್ವದ್ದಾಗಿದೆ. ದೇಶದಲ್ಲಿ ಬದುಕಲು, ಮತದಾನದ ಹಕ್ಕು ಉಳಿಸಿಕೊಳ್ಳಲು, ಮಕ್ಕಳ ಹಕ್ಕಿನ ಭದ್ರತೆಗಾಗಿ ಎಸ್‌ಐಆರ್ ಪ್ರಾಮುಖ್ಯತೆ ಪಡೆದಿದೆ ಎಂದು ಶಾಸಕರು ತಿಳಿಸಿದರು. ಅರ್ಹ ಪ್ರತಿಯೊಬ್ಬ ಮತದಾರರು…
