ಜೆಡಿಎಸ್ ಜಿಲ್ಲಾ ಮಹಿಳಾ ಘಟಕ ಪದಗ್ರಹಣ ಸಮಾರಂಭ.ಮಹಿಳಾ ಸಂಘಟನೆ ಮತ್ತಷ್ಟು ಬಲಪಡಿಸಲು ಕರೆ

ಮಂಗಳೂರು, ಜೂನ್ 30: ಜನತಾದಳ (ಜಾತ್ಯತೀತ) ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಘಟಕದ ವತಿಯಿಂದ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಸಂಘಟನಾ ಸಭೆ ಮಂಗಳವಾರ ನಗರದ ವುಡ್‌ಲ್ಯಾಂಡ್ಸ್ ಹೋಟೆಲ್‌ನಲ್ಲಿ ನಡೆಯಿತು.ಶಾರದಾ ಶೆಟ್ಟಿ ಅವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಜ್ಯೋತಿ ಜೈನ್ ಅವರು ಸಭಿಕರನ್ನು ಸ್ವಾಗತಿಸಿದರು. ಪ್ರಸ್ತಾವಿಕವಾಗಿ ಮಾತನಾಡಿದ ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ ಜಪ್ಪು, ಮಹಿಳಾ ಸಂಘಟನೆಯನ್ನು ಗ್ರಾಮ ಮಟ್ಟದಿಂದ ಜಿಲ್ಲಾ ಮಟ್ಟದವರೆಗೆ…

Read More

ಆಳ ಸಮುದ್ರದಲ್ಲಿ ಭಾರತೀಯ ತಟರಕ್ಷಣಾ ಪಡೆಯ ಸಾಹಸ ಕಾರ್ಯಾಚರಣೆಮುಳುಗುತ್ತಿದ್ದ ಮೀನುಗಾರಿಕಾ ಬೋಟ್‌ನಲ್ಲಿದ್ದ ಆರು ಮೀನುಗಾರರ ರಕ್ಷಣೆ

ಮಂಗಳೂರು, ಜೂನ್ 30: ಭಾರತೀಯ ತಟರಕ್ಷಣಾ ಪಡೆ (ಇಂಡಿಯನ್ ಕೋಸ್ಟ್ ಗಾರ್ಡ್) ಆಳ ಸಮುದ್ರದಲ್ಲಿ ಅತ್ಯಂತ ಸವಾಲಿನ ರಕ್ಷಣಾ ಕಾರ್ಯಾಚರಣೆ ನಡೆಸಿ ಅಪಾಯಕ್ಕೆ ಸಿಲುಕಿದ್ದ ಆರು ಮಂದಿ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸುವಲ್ಲಿ ಯಶಸ್ವಿಯಾಗಿದೆ. ಉಡುಪಿಯ ‘ಮಂಜು ಮಾತಾ’ ಹೆಸರಿನ ಮೀನುಗಾರಿಕಾ ಬೋಟ್ ಕರಾವಳಿಯಿಂದ ಸುಮಾರು 33 ನಾಟಿಕಲ್ ಮೈಲು ದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಬೋಟ್‌ನ ತಳಭಾಗಕ್ಕೆ ಹಾನಿಯಾಗಿದ್ದು, ಸಮುದ್ರದ ನೀರು ಬೋಟ್‌ನೊಳಗೆ ನುಗ್ಗಲಾರಂಭಿಸಿತ್ತು. ಪರಿಣಾಮ ಬೋಟ್ ಮುಳುಗುವ ಹಂತ ತಲುಪಿದ್ದು, ಅದರಲ್ಲಿದ್ದ ಆರು ಮಂದಿ ಮೀನುಗಾರರು…

Read More

ತೈಲ ಬೆಲೆ ಏರಿಕೆ ಹಿನ್ನೆಲೆ ಆಟೋ ಬಾಡಿಗೆ ದರ ಪರಿಷ್ಕರಣೆಗೆ ಆಗ್ರಹ.ಕನಿಷ್ಠ ದರ ₹50, ಪ್ರತಿ ಕಿ.ಮೀ.ಗೆ ₹30 ನಿಗದಿಪಡಿಸುವಂತೆ ಎಸ್.ಡಿ.ಟಿ.ಯು. ಮನವಿ

ಮಂಗಳೂರು:ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳ ನಿರಂತರ ಏರಿಕೆಯಿಂದ ಆಟೋ ಚಾಲಕರ ಜೀವನೋಪಾಯ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಪ್ರಸ್ತುತ ಜಾರಿಯಲ್ಲಿರುವ ಆಟೋ ಬಾಡಿಗೆ ದರ ಚಾಲಕರ ಜೀವನ ನಿರ್ವಹಣೆಗೆ ಸಾಕಾಗುತ್ತಿಲ್ಲ ಎಂದು ಆರೋಪಿಸಿರುವ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (ಎಸ್.ಡಿ.ಟಿ.ಯು.) ನಿಯೋಗವು ಆಟೋ ಬಾಡಿಗೆ ದರ ಪರಿಷ್ಕರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ. ಮನವಿಯಲ್ಲಿ, ಇಂಧನ ಬೆಲೆ, ವಾಹನಗಳ ನಿರ್ವಹಣಾ ವೆಚ್ಚ, ಬಿಡಿಭಾಗಗಳ ಬೆಲೆ, ವಿಮೆ ಸೇರಿದಂತೆ ವಿವಿಧ ನಿರ್ವಹಣಾ ವೆಚ್ಚಗಳು ಗಣನೀಯವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಆಟೋ…

Read More

ವಿಧಾನ ಪರಿಷತ್ ಚುನಾವಣೆ ಅಡ್ಡ ಮತದಾನ ವಿವಾದ: ಧರ್ಮಸ್ಥಳದಲ್ಲಿ ಶಾಸಕ ಹೆಚ್.ಕೆ. ಸುರೇಶ್ ಆಣೆ-ಪ್ರಮಾಣ

ಬೇಲೂರು/ಧರ್ಮಸ್ಥಳ: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಆರೋಪ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ನಡುವೆಯೇ, ಬೇಲೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹೆಚ್.ಕೆ. ಸುರೇಶ್ ಅವರು ಮಂಗಳವಾರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ತಾವು ಯಾವುದೇ ಅಡ್ಡ ಮತದಾನ ಮಾಡಿಲ್ಲ ಎಂದು ಆಣೆ-ಪ್ರಮಾಣ ಮಾಡಿದರು. ವಿಧಾನ ಪರಿಷತ್ ಚುನಾವಣೆಯ ಬಳಿಕ ಅಡ್ಡ ಮತದಾನ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡಿಸುವ ಕುರಿತು ಹೇಳಿಕೆ ನೀಡಿದ್ದರು….

Read More

ಉಪ್ಪಳದಲ್ಲಿ ಬೆಚ್ಚಿಬೀಳಿಸಿದ ದರೋಡೆ: ಮೀನು ಮಾರಾಟಗಾರ್ತಿಯ ಕುತ್ತಿಗೆಯಿಂದ ಸರ, ಕಿವಿಯಿಂದ ಬೆಂಡೋಲೆ ದೋಚಿದ ಕ್ರೂರಿಗಳು

ಮಂಜೇಶ್ವರ: ಹಗಲಹೊತ್ತಲ್ಲೇ ನಡೆದ ಭೀಕರ ದರೋಡೆ ಪ್ರಕರಣವೊಂದು ಉಪ್ಪಳ ಮಣಿಮುಂಡದಲ್ಲಿ ಬೆಳಕಿಗೆ ಬಂದಿದೆ. ಮೀನು ಮಾರಾಟಕ್ಕಾಗಿ ತೆರಳುತ್ತಿದ್ದ 60 ವರ್ಷದ ವೃದ್ಧ ಮಹಿಳೆಯೊಬ್ಬರನ್ನು ದಾರಿ ಅಡ್ಡಗಟ್ಟಿ, ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಸಿ ಆಭರಣಗಳನ್ನು ದೋಚಿರುವ ಹೇಯ ಕೃತ್ಯ ಇಂದು ಬೆಳಿಗ್ಗೆ ನಡೆದಿದೆ.​ ಉಪ್ಪಳ ಶಾರದಾ ನಗರ ನಿವಾಸಿಯಾದ ವೃದ್ಧ ಮಹಿಳೆ, ಇಂದು ಬೆಳಿಗ್ಗೆ ಸುಮಾರು 10 ಗಂಟೆ ಸುಮಾರಿಗೆ ಮೀನು ಮಾರಾಟಕ್ಕಾಗಿ ಮಣಿಮುಂಡ ರೈಲ್ವೇ ಅಡಿಸೇತುವೆ ಮಾರ್ಗವಾಗಿ ಸಾಗುತ್ತಿದ್ದರು. ಇದನ್ನೇ ಕಾಯುತ್ತಿದ್ದ ದುಷ್ಕರ್ಮಿಗಳು, ಏಕಾಏಕಿ ಮಹಿಳೆಯ ದಾರಿ ತಡೆದು…

Read More

ಒಕ್ಕಲಿಗರ ಕುರಿತು ಶಾಸಕ ವಿಶ್ವನಾಥ್ ಹೇಳಿಕೆ: ಪುತ್ತೂರಿನಲ್ಲಿ ತೀವ್ರ ಆಕ್ರೋಶ

ಪುತ್ತೂರು: “ಸಾಮಾನ್ಯವಾಗಿ ಹಳೇ ಮೈಸೂರು ಭಾಗದವರನ್ನು ಮಾತ್ರ ಒಕ್ಕಲಿಗರು ಎನ್ನಲಾಗುತ್ತದೆ, ಅವರೇನೂ ದೊಡ್ಡ ಗೌಡರಲ್ಲ” ಎಂದು ಯಲಹಂಕ ಶಾಸಕ ವಿಶ್ವನಾಥ್‌ ನೀಡಿರುವ ಹೇಳಿಕೆಗೆ ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಶಾಸಕರ ಹೇಳಿಕೆಯನ್ನು ಕೂಡಲೇ ಹಿಂಪಡೆಯಬೇಕು ಮತ್ತು ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಎಂದು ಸಂಘದ ಅಧ್ಯಕ್ಷ ಸುಂದರ ಗೌಡ ನಡುಬೈಲು ಮತ್ತು ಚಿದಾನಂದ ಬೈಲಾಡಿ, ಆಗ್ರಹಿಸಿದ್ದಾರೆ. “ಇಲ್ಲದಿದ್ದಲ್ಲಿ ದಕ್ಷಿಣ ಕನ್ನಡ ಒಕ್ಕಲಿಗ ಗೌಡ ಸಮುದಾಯದಿಂದ ಕಾನೂನಾತ್ಮಕವಾಗಿ ಅಥವಾ ಇತರ ಮಾರ್ಗದಲ್ಲಿ ಹೋರಾಟ ನಡೆಸಲಾಗುವುದು”…

Read More

ಶ್ರೀ ಇರಾ ನೇಮು ಪೂಜಾರಿಯವರೀಗೆ “ರಾಷ್ಟ್ರಕವಿ ಗೋವಿಂದ ಪೈ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ 2026.ಕ್ಕೆ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ, ಅಧ್ಯಕ್ಷರಾಗಿ ಪ್ರಸ್ತುತ ಗೌರವ ಅಧ್ಯಕ್ಷರಾಗಿ, ಸಾಹಿತ್ಯ ಲೋಕಕ್ಕೆ ನೀಡಿದ ಅನುಪಮ ಸೇವೆ, ಕಾರ್ಕಳ “ಕವಿರತ್ನಾಕರವರ್ಣಿ “ವಿದ್ಯಾಪೀಠದ ಮತ್ತು ಮೂಡಿಗೆರೆ ಹೊಯ್ಸಳ ವಿದ್ಯಾಪೀಠದ ಪ್ರಾಂಶುಪಾಲರಾಗಿ ಮಾಡಿದ ಸಾಹಿತ್ಯ ಸೇವೆ, ಶೈಕ್ಷಣಿಕ ಸೇವೆಯನ್ನು ಪರಿಗಣಿಸಿ, ಇವರೀಗೆ ಕಾಸರಗೋಡು ಕನ್ನಡ ಭವನದ ರಜತ ಸಂಭ್ರಮ ಸಮಾರೋಪ ಪ್ರಯುಕ್ತ, ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಪದವಿ ಸೇವಾಕಾಂಕ್ಷಿ ಡಾ. ಸೋಮಶೇಖರ್ ಐ. ಎ. ಎಸ್. ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ “ಕರ್ನಾಟಕ -ಗಡಿನಾಡು ಕನ್ನಡ ಸಮ್ಮೇಳನ “ದಲ್ಲಿ…

Read More

ರಂಗಭೂಮಿ ಸಮಾಜ ಪರಿವರ್ತನೆಗೆ ಪ್ರೇರಣೆ: ‘ಕೃಷ್ಣಾಪುರ ರಂಗಪರ್ವ–2026’ಗೆ ಚಾಲನೆ

ಮಂಗಳೂರು, ಜೂನ್ 28: ರಂಗಭೂಮಿ ಕಲೆಯು ಸಂಗೀತ, ಭಾಷೆ ಹಾಗೂ ಸಾಹಿತ್ಯ ಕ್ಷೇತ್ರಗಳ ಬೆಳವಣಿಗೆಗೆ ಪೂರಕವಾಗಿದ್ದು, ಕಲಾವಿದರಿಗೆ ವಿಪುಲ ಅವಕಾಶಗಳನ್ನು ಒದಗಿಸುತ್ತದೆ. ದೇಶದ ಸಂಸ್ಕೃತಿ ಮತ್ತು ಮೌಲ್ಯಗಳ ಸಂರಕ್ಷಣೆ ಹಾಗೂ ವೃದ್ಧಿಗೆ ನಾಟಕ ಮಾಧ್ಯಮವು ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಸೆಪ್ಟೆಂಬರ್ 6ರಿಂದ 12ರವರೆಗೆ ಕೃಷ್ಣಾಪುರದಲ್ಲಿ ನಡೆಯಲಿರುವ ಅಂತರ್‌ರಾಜ್ಯ ಮಟ್ಟದ ತುಳು ನಾಟಕ ಸ್ಪರ್ಧಾ ಸಪ್ತಾಹ…

Read More

ಶೆಡ್ಡೆ ಶ್ರೀ ವಿಷ್ಣುಮೂರ್ತಿ ನೂತನ ದೇವಸ್ಥಾನಕ್ಕೆ ಜುಲೈ 2ರಂದು ಶಿಲಾನ್ಯಾಸ

ಮಂಗಳೂರು: ಶೆಡ್ಡೆಯ ಶ್ರೀ ವಿಷ್ಣುಮೂರ್ತಿ ನೂತನ ದೇವಸ್ಥಾನದ ಶಿಲಾನ್ಯಾಸ ಮಹೋತ್ಸವವು ಜುಲೈ 2ರಂದು ಗುರುವಾರ ಬೆಳಿಗ್ಗೆ 8.30ಕ್ಕೆ ಶೆಡ್ಡೆಯಲ್ಲಿ ನಡೆಯಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹಾಗೂ ಕೋಶಾಧಿಕಾರಿ ಎಸ್. ಶಿವರಾಮ ಮಲ್ಲಿ ಅರ್ಬಿ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಡುಪು ನರಸಿಂಹ ತಂತ್ರಿ, ಕುಡುಪು ಕೃಷ್ಣರಾಜ ತಂತ್ರಿ, ಶ್ರೀನಿವಾಸ ಉಡುಪರು ಹಾಗೂ ರಾಮಚಂದ್ರ ಉಡುಪರು ಶಿಲಾನ್ಯಾಸ ವಿಧಿವಿಧಾನಗಳನ್ನು ನೆರವೇರಿಸಲಿದ್ದಾರೆ ಎಂದರು. ಬಳಿಕ ಬೆಳಿಗ್ಗೆ 9.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು,…

Read More

ಬಿಜೆಪಿ ನಾಯಕರ ನಡುವೆ ವಾಕ್ಯುದ್ಧ: ಹೈಕಮಾಂಡ್‌ಗೆ ದೂರು ನೀಡಲು ಸದಾನಂದಗೌಡ ನಿರ್ಧಾರ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಆಂತರಿಕ ಭಿನ್ನಮತ ಮತ್ತೆ ಬಹಿರಂಗವಾಗಿದ್ದು, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಹಾಗೂ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ನಡುವಿನ ವಾಕ್ಸಮರ ತೀವ್ರಗೊಂಡಿದೆ. ಅಡ್ಡ ಮತದಾನ ಹಾಗೂ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವಿಚಾರವಾಗಿ ವಿಶ್ವನಾಥ್, ಸದಾನಂದಗೌಡರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ, ಕಾಂಗ್ರೆಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದನ್ನು ಪ್ರಶ್ನಿಸಿದ್ದರು. ಅಲ್ಲದೆ, ಅವರ ವರ್ತನೆ ಪಕ್ಷಕ್ಕೆ ಶೋಭೆ ತರುವಂತದ್ದಲ್ಲ ಎಂದು ಟೀಕಿಸಿದ್ದರು. ಇದಕ್ಕೆ ಸೋಮವಾರ ತಿರುಗೇಟು ನೀಡಿದ ಸದಾನಂದಗೌಡ, ಎಸ್.ಆರ್. ವಿಶ್ವನಾಥ್ ವಿರುದ್ಧ ಕಿಡಿಕಾರಿದ್ದು,…

Read More
error: Content is protected !!