ಪ್ರಧಾನಿ ನರೇಂದ್ರ ಮೋದಿ ಅವಧಿಯಲ್ಲಿ ಮೊದಲಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಗೋಮಾಂಸ ರಫ್ತು ಆಗುತ್ತಿರುವುದು ದುರಂತ : ದಯಾನಂದ ಸ್ವಾಮಿಜಿ
ಉಡುಪಿ :ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರ ಸರಕಾರದ ಗೋಮಾಂಸ ರಫ್ತು, ಹಾಗೂ ಗೋಹತ್ಯೆ ನಿಷೇಧ ಮಾಡದ ಬಗ್ಗೆ ಟೀಕಿಸಿದ್ದ ನರೇಂದ್ರ ಮೋದಿ, ಮೂರು ಬಾರಿ ಪ್ರಧಾನಿಯಾದರೂ ಇನ್ನೂ ಯಾಕೆ ಗೋಹತ್ಯೆಯನ್ನು ದೇಶದಲ್ಲಿ ನಿಷೇಧ ಮಾಡುತ್ತಿಲ್ಲ. ದುರಂತ ಅಂದರೆ ಮೋದಿ ಅವಧಿಯಲ್ಲಿ ಮೊದಲಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಗೋಮಾಂಸ ರಫ್ತು ಆಗುತ್ತಿದೆ. ಭಾರತ ಗೋಮಾಂಸ ರಫ್ತನಲ್ಲಿ ಇಡೀ ಜಗತ್ತಿನಲ್ಲಿಯೇ ಇಂದು ಎರಡನೇ ಸ್ಥಾನದಲ್ಲಿದೆ ಎಂದು ವಿಶ್ವಪ್ರಾಣಿ ಕಲ್ಯಾಣ ಮಂಡಳಿ ಅಧ್ಯಕ್ಷ, ಬೆಂಗಳೂರು ವಿಶ್ವ ಗೋರಕ್ಷಾ ಮಹಾಪೀಠದ ದಯಾನಂದ ಸ್ವಾಮೀಜಿ ಟೀಕಿಸಿದ್ದಾರೆ. ಉಡುಪಿಯಲ್ಲಿಂದು…