ಆನೆಕಲ್ಲು ಶಾಲೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಮಹಾಸಭೆ.
ಆನೆಕಲ್ಲು:: ಎ.ಯು. ಪಿ ಶಾಲೆ ಆನೆಕಲ್ಲಿನಲ್ಲಿ ರಕ್ಷಕ ಶಿಕ್ಷಕ ಸಂಘದ ಮಹಾಸಭೆಯು ಜರಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಪ್ರಶಾಂತ್ ನೆರವೇರಿಸಿದರು. ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಅಶೋಕ್ ಕೊಡ್ಲಮೊಗರು ರವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಶಾಲಾ ಪ್ರಬಂಧಕ ಪ್ರತಿನಿಧಿ ಮುರಳಿ ಶ್ಯಾಮ್,ಎಸ್.ಎಂ.ಸಿ ಅಧ್ಯಕ್ಷರಾದ ಅಶ್ರಫ್, ಮಾತೃ ಮಂಡಳಿ ಅಧ್ಯಕ್ಷರಾದ ಶೋಭ ಕತ್ತೆರಿಕೋಡಿ, ನಿವೃತ್ತ ಮುಖ್ಯೋಪಾಧ್ಯಾಯಿನಿ ರೇಣುಕಾ ಮೊದಲಾದವರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಶಾಲಾ ಮುಖ್ಯೋಪಾಧ್ಯಯರಾದ ರವಿಶಂಕರ್ ಸರ್ ವಾರ್ಷಿಕ ವರದಿ ಹಾಗೂ…
