ರಾಮ ಮಂದಿರ ಟ್ರಸ್ಟ್ ದೇಣಿಗೆ ಲೆಕ್ಕಕ್ಕೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಲಿ: ಬಿ.ಕೆ. ಹರಿಪ್ರಸಾದ್ ಆಗ್ರಹ
ಬೆಂಗಳೂರು: ಅಯೋಧ್ಯೆಯ ಶ್ರೀರಾಮ ಮಂದಿರ ಟ್ರಸ್ಟ್‌ಗೆ ಉದ್ಯಮಿ ಮುಕೇಶ್ ಅಂಬಾನಿ ಸೇರಿದಂತೆ ವಿವಿಧ ದಾನಿಗಳಿಂದ ನೀಡಲಾಗಿರುವ ಕೋಟ್ಯಂತರ ರೂಪಾಯಿ ದೇಣಿಗೆಯ ಲೆಕ್ಕ ಸಾರ್ವಜನಿಕವಾಗಿ ಬಹಿರಂಗವಾಗಿಲ್ಲ ಎಂದು ಆರೋಪಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಕೆ. ಹರಿಪ್ರಸಾದ್, ಈ ಕುರಿತು ಹಾಲಿ ಅಥವಾ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಸ್ವತಂತ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ಶನಿವಾರ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮ ಮಂದಿರ ಟ್ರಸ್ಟ್‌ಗೆ ಸಂಬಂಧಿಸಿದ ದೇಣಿಗೆ ಹಾಗೂ ಅದರ ಬಳಕೆ ಕುರಿತಂತೆ ಪಾರದರ್ಶಕತೆ ಇರಬೇಕೆಂದು…
