Headlines

ನಗರಪಾಲಿಕೆಯಿಂದ ಬೀದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ವಿರುದ್ದ ಆಕ್ರೋಶ: ಪ್ರತಿಭಟನಾಕಾರರ ಬಂಧನ

ಬೀದಿಬದಿ ವ್ಯಾಪಾರಿಗಳ ವ್ಯಾಪಕ ವಿರೋಧದ ನಡುವೆ ನಗರದ ಮೈದಾನ ರಸ್ತೆ, ಲೇಡಿ ಘೋಷನ್ ಆಸ್ಪತ್ರೆ ರಸ್ತೆ, ಪುರಭವನದ ಬಳಿ ವ್ಯಾಪಾರ ಮಾಡುವ ಬೀದಿ ವ್ಯಾಪಾರಿಗಳನ್ನು ನಗರಪಾಲಿಕೆ ಆಯುಕ್ತರಾದ ರವಿಚಂದ್ರ ನಾಯಕ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ಪಾಲಿಕೆ ಅಧಿಕಾರಿಗಳು ತೆರವು ಕಾರ್ಯಾಚರಣೆ ಆರಂಭಿಸುತ್ತಿದ್ದಂತೆ ಬೀದಿಬದಿ ವ್ಯಾಪಾರಿಗಳು ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ ಆರಂಭಿಸಿದರು ಬೀದಿ ವ್ಯಾಪಾರದ ನಿಯಮನುಸಾರ ಪರ್ಯಾಯ ವ್ಯವಸ್ಥೆ ಮಾಡಿದ ನಂತರ ಕಾರ್ಯಾಚರಣೆ ನಡೆಸಿ ಎಂದು ಆಯುಕ್ತರಲ್ಲಿ ವಿನಂತಿಕೊಂಡರೂ ಪಾಲಿಕೆ ಆಯುಕ್ತರು ಬೀದಿಬದಿ ವ್ಯಾಪಾರಿಗಳ ಆಗ್ರಹವನ್ನು ಕಡೆಗಣಿಸಿ ಏಕಪಕ್ಷೀಯ…

Read More

ಜಿಲ್ಲೆಯಲ್ಲಿ ಪೋಲಿಯೊ ಲಸಿಕಾ ಅಭಿಯಾನಕ್ಕೆ ಚಾಲನೆ: 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿ – ಐವನ್ ಡಿಸೋಜಾ

5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೊ ಲಸಿಕೆ ನೀಡುವ ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನಕ್ಕೆ ಭಾನುವಾರ ಮಂಗಳೂರಿನ ಸರಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಚಾಲನೆ ನೀಡಲಾಯಿತು. ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಅವರು ಮಗುವಿಗೆ ಪೋಲಿಯೊ ಹನಿ ಹಾಕುವ ಮೂಲಕ ಅಭಿಯಾನಕ್ಕೆ ಅಧಿಕೃತ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಭಾರತವು ಪೋಲಿಯೊ ಮುಕ್ತ ರಾಷ್ಟ್ರವಾಗಿ ಗುರುತಿಸಿಕೊಂಡಿದ್ದರೂ, ಆ ಸಾಧನೆಯನ್ನು ಉಳಿಸಿಕೊಳ್ಳಲು ಪ್ರತಿಯೊಬ್ಬ ಮಗುವಿಗೂ ಪೋಲಿಯೊ ಲಸಿಕೆ ನೀಡುವುದು ಅತ್ಯಗತ್ಯವಾಗಿದೆ. ಪಾಲಕರು ಯಾವುದೇ ನಿರ್ಲಕ್ಷ್ಯ ವಹಿಸದೆ ತಮ್ಮ 5 ವರ್ಷದೊಳಗಿನ…

Read More

ಕೇರಳದಲ್ಲೂ ‘ಬಂಗಾಳ’ ಪುನರಾವರ್ತನೆಯಾಗಲಿದೆ: ಎಂ.ಎಲ್. ಅಶ್ವಿನಿ

ಮುಳಿಯಾರು: ಮುಂಬರುವ ಚುನಾವಣೆಗಳಲ್ಲಿ ಕೇರಳದಲ್ಲೂ ಬಂಗಾಳದ ಇತಿಹಾಸ ಪುನರಾವರ್ತನೆಯಾಗಲಿದ್ದು, ಕೇರಳ ವಿಧಾನಸಭೆಯಲ್ಲೂ ಬಿಜೆಪಿಯ ಪ್ರಾತಿನಿಧ್ಯವು ಮೂರರಿಂದ ಮೂವತ್ತಕ್ಕೆ ಬೆಳೆಯಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರಾದ ಎಂ.ಎಲ್. ಅಶ್ವಿನಿ ಹೇಳಿದರು. ಬಿಜೆಪಿ ಮುಳಿಯಾರು ಕ್ಷೇತ್ರ ಸಮಿತಿ ಆಯೋಜಿಸಿದ್ದ ದ್ವಿದಿನ ಅಧ್ಯಯನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು. ನಮ್ಮ ದೇಶದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಸೋಲಿನಿಂದ ಪಾಠ ಕಲಿತು ಅತ್ಯಂತ ಬಲಿಷ್ಠವಾಗಿ ಮರಳಿ ಬಂದ ಇತಿಹಾಸ ಬಿಜೆಪಿಗಿದೆ. ದೇಶ ಮತ್ತು ಸಂಘಟನೆಯ ಹಿತಾಸಕ್ತಿಯ ಮುಂದೆ ವ್ಯಕ್ತಿಗಳಿಗೆ ಹಾಗೂ ವೈಯಕ್ತಿಕ ಹಿತಾಸಕ್ತಿಗಳಿಗೆ…

Read More

ಪೊಲೀಸ್ ಅಧಿಕಾರಿಯ ಬದುಕಿನ ಹೋರಾಟ: ಶಸ್ತ್ರಚಿಕಿತ್ಸೆಯ ಬಳಿಕ ಎರಡನೇ ಕಾಲನ್ನೂ ಕಳೆದುಕೊಂಡ ಕೆ.ಎಂ. ಸೂರಜ್

ಕಾಸರಗೋಡು: ಕರ್ತವ್ಯದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪೈಲಿಕೋಡ್ ಮೂಲದ ಸಿವಿಲ್ ಪೊಲೀಸ್ ಅಧಿಕಾರಿ ಕೆ.ಎಂ. ಸೂರಜ್ ಅವರ ಎರಡನೇ ಕಾಲನ್ನು ಶಸ್ತ್ರಚಿಕಿತ್ಸೆ ಮೂಲಕ ಕತ್ತರಿಸಲಾಗಿದೆ. ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರ ಬಲಗಾಲಿಗೆ ಶೇ. 70ರಷ್ಟು ಗಾಯಗಳಾಗಿದ್ದು, ಹಲವು ಬಾರಿ ಶಸ್ತ್ರಚಿಕಿತ್ಸೆ ನಡೆಸಿದರೂ ಯಶಸ್ವಿಯಾಗದ ಕಾರಣ ಅನಿವಾರ್ಯವಾಗಿ ವೈದ್ಯರು ಈ ನಿರ್ಧಾರ ಕೈಗೊಂಡಿದ್ದಾರೆ. ​ಈ ತಿಂಗಳು 18ರಂದು ಪಡನ್ನಾಕಾಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ, ನಿಯಂತ್ರಣ ತಪ್ಪಿ ಬಂದ ಕಾರು…

Read More

ಸಿಎಂ ಡಿ.ಕೆ. ಶಿವಕುಮಾರ್ ನಿವಾಸದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ

ಬೆಂಗಳೂರು: ದೇಶವನ್ನು ಪೋಲಿಯೋ ಮುಕ್ತವಾಗಿಡುವ ಸಂಕಲ್ಪದೊಂದಿಗೆ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿರುವ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕೃತ ಚಾಲನೆ ನೀಡಿದರು. ಬೆಂಗಳೂರಿನ ತಮ್ಮ ನಿವಾಸದಲ್ಲೇ ರಾಜ್ಯ ಮಟ್ಟದ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, 0 ರಿಂದ 5 ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಪೋಷಕರಿಗೆ ಮನವಿ ಮಾಡಿದರು. ಪಲ್ಸ್ ಪೋಲಿಯೋ ಅಭಿಯಾನದ ಕುರಿತು ಮಾತನಾಡಿದ ಅವರು, “ನನ್ನ ಮೊಮ್ಮಗಳಿಗೆ ಕೇವಲ ಒಂದು ತಿಂಗಳು ವಯಸ್ಸು. ಅವಳಿಗೂ ಪೋಲಿಯೋ…

Read More

ಕಾಸರಗೋಡು ಗೋ- ಕುಟೀರ”ದ ನಿರ್ಮಾಣಕ್ಕೆ ಗೋ- ಭಕ್ತರು,ಗೋ- ಪೋಷಕರು ದಾನಿಗಳಿಂದ ಸಹಕಾರದ ನಿರೀಕ್ಷೆಯಲ್ಲಿ..

ಕಾಸರಗೋಡು :- ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.),ಕಾಸರಗೋಡು ಇದರ 35ನೇ ಸಂಸ್ಥಾಪನಾ ವರ್ಷಾಚರಣೆಯ ಸಂಭ್ರಮದ ಪ್ರಯುಕ್ತ ಕಾಸರಗೋಡು ಕನ್ನಡ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ “ಕಾಸರಗೋಡು ಗೋ-ಕುಟೀರ”ದ ಕಾಮಗಾರಿಗೆ ಗೋ- ಭಕ್ತರು, ಗೋ -ಪೋಷಕರು, ದಾನಿಗಳಿಂದ ಆರ್ಥಿಕ ಸಹಾಯ,ಸಹಕಾರ ಪ್ರೋತ್ಸಾಹವನ್ನು ನೀಡುವಂತೆ ಮನವಿ ಮಾಡಲಾಗಿದೆ. ದೇಸಿ ಗೋವುಗಳನ್ನು ಉಳಿಸಿ ಬೆಳೆಸುವುದಕ್ಕಾಗಿ ಸುಮಾರು 25 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಾಸರಗೋಡು ಗೋ -ಕುಟೀರವನ್ನು ಜಗಜ್ಜನನಿ ಗೋಮಾತೆಯ ಆಶೀರ್ವಾದವನ್ನು ಪಡೆಯುವ ಉದ್ದೇಶದಿಂದ ಒಂದು ಧಾರ್ಮಿಕ ಶ್ರದ್ಧಾ ಕೇಂದ್ರವನ್ನಾಗಿ ರೂಪುಗೊಳಿಸುವುದಕ್ಕಾಗಿ ದೈವಾರ್ಷಿಕ ಕಾರ್ಯ…

Read More

ಉದ್ಯಾವರ ದುಬೈ ಸಮಿತಿ ಯುಡಿಸಿ ವತಿಯಿಂದ ಎಸ್ ಎಸ್ ಎಲ್ ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಮಂಜೇಶ್ವರ: ಉದ್ಯಾವರ ಪ್ರದೇಶದ ದುಬೈನಲ್ಲಿ ನೆಲೆಸಿರುವ ಪ್ರವಾಸಿಗರ ಒಕ್ಕೂಟವಾದ ‘ಉದ್ಯಾವರ ದುಬೈ ಸಮಿತಿ’ ಯುಡಿಸಿ SSLC ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳಲ್ಲೂ ‘ಎ ಪ್ಲಸ್’ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಿ, ‘ಎಜುಕೇಷನಲ್ ಎಕ್ಸಲೆನ್ಸ್ ಅವಾರ್ಡ್-2026’ ನೀಡಿ ಸನ್ಮಾನಿಸಿತು. ​ಕಳೆದ 40 ವರ್ಷಗಳಿಂದ ಉದ್ಯಾವರ ಪ್ರದೇಶದಲ್ಲಿ ಸಾಮಾಜಿಕ, ಶೈಕ್ಷಣಿಕ, ಕ್ರೀಡಾ ಮತ್ತು ಮಾನವೀಯ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಉದ್ಯಾವರ ದುಬೈ ಸಮಿತಿಯು, ಶಿಕ್ಷಣ ಕ್ಷೇತ್ರಕ್ಕೆ ನೀಡುತ್ತಿರುವ ಪ್ರೋತ್ಸಾಹ ಶ್ಲಾಘನೀಯವಾಗಿದೆ. ​ಮಂಜೇಶ್ವರದ ಎ.ಕೆ. ಗಾರ್ಡನ್‌ನಲ್ಲಿ ನಡೆದ ಸಮಾರಂಭವನ್ನು ಮಂಜೇಶ್ವರ ಬ್ಲಾಕ್ ಪಂಚಾಯತ್…

Read More

​ಮಂಜೇಶ್ವರದಲ್ಲಿ ಪೋಲಿಯೋ ಲಸಿಕಾ ಅಭಿಯಾನ: ಜನಪ್ರತಿನಿಧಿಗಳು ಮತ್ತು ಆರೋಗ್ಯ ಕಾರ್ಯಕರ್ತರ ಸಕ್ರಿಯ ಭಾಗಿ

ಮಂಜೇಶ್ವರ: ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ, ಭಾನುವಾರ ಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪೋಲಿಯೋ ಲಸಿಕಾ ಅಭಿಯಾನವು ಅತ್ಯಂತ ಉತ್ಸಾಹ ಮತ್ತು ಸಡಗರದಿಂದ ನಡೆಯಿತು. ಈ ಅಭಿಯಾನದಲ್ಲಿ ಜನಪ್ರತಿನಿಧಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಕೈಜೋಡಿಸಿ ಯಶಸ್ವಿಗೊಳಿಸಿದರು. ​ಮಂಜೇಶ್ವರ ಸರಕಾರಿ ಆಸ್ಪತ್ರೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಶೀರ್ ಕನಿಲ ಅವರು ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಕ್ಕಳ ಆರೋಗ್ಯ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು,…

Read More

ಮಣ್ಣಗುಡ್ಡೆ ಸರಕಾರಿ ಶಾಲೆಯಲ್ಲಿ119ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮ

ಮಂಗಳೂರು, ಜೂ.27;ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ದ.ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆ ಮಣ್ಣಗುಡ್ಡೆ ಇವರ ಜಂಟಿ ಆಶ್ರಯದಲ್ಲಿ 119ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮವು ಜೂನ್ 27ರಂದು ಶನಿವಾರ ದ.ಕ. ಜಿ.ಪ ಹಿರಿಯ ಪ್ರಾಥಮಿಕ ಶಾಲೆ ಮಣ್ಣಗುಡ್ಡ ಇಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ನಳಿನಿ ಅವರು ವಹಿಸಿದ್ದರು.ಮುಖ್ಯ ಸಂಪನ್ಮೂಲ ಅತಿಥಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಪುಷ್ಪರಾಜ್ ಬಿ.ಎನ್ ಮಾತನಾಡುತ್ತಾ, ವಿದ್ಯಾರ್ಥಿಗಳು ಸಾಹಿತ್ಯದ ಬಗ್ಗೆ ಅಭಿರುಚಿ ಬೆಳೆಸಿಕೊಳ್ಳಲುಓದುವ ಚಟು…

Read More

ಕೆಕೆಪಿಎಲ್‌ಗೆ ಸಜ್ಜಾದ ಮಂಗಳೂರು ತಂಡ; ಹೆಸರು-ಲೋಗೋ ಬಿಡುಗಡೆ

ಮಂಗಳೂರು, ಜೂನ್ 27: ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ (ಕೆಕೆಪಿಎಲ್) ಪಂದ್ಯಾವಳಿಯಲ್ಲಿ ಭಾಗವಹಿಸಲಿರುವ ದಕ್ಷಿಣ ಕನ್ನಡ ಜಿಲ್ಲೆಯ ‘ಮಂಗಳೂರು’ ತಂಡದ ಅಧಿಕೃತ ಹೆಸರು ಹಾಗೂ ಲೋಗೋವನ್ನು ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ ಅವರು ಶನಿವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಅವರು, ಕರಾವಳಿ ಭಾಗದ ಕಬಡ್ಡಿ ಪ್ರತಿಭೆಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಅವಕಾಶ ಮತ್ತು ವೇದಿಕೆ ಕಲ್ಪಿಸುವ ಉದ್ದೇಶದಿಂದ ಮಂಗಳೂರು ತಂಡವನ್ನು ಖರೀದಿಸಲಾಗಿದೆ ಎಂದು ತಿಳಿಸಿದರು. ಗ್ರಾಮೀಣ ಕ್ರೀಡೆಯಾದ ಕಬಡ್ಡಿಯನ್ನು ಮತ್ತಷ್ಟು…

Read More
error: Content is protected !!